ETV Bharat / bharat

ನೋಯ್ಡಾದ ನಿವೃತ್ತ ಐಪಿಎಸ್ ಅಧಿಕಾರಿ ನಿವಾಸದ ಮೇಲೆ ಐಟಿ ದಾಳಿ

ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್ -50 ರಲ್ಲಿರುವ ನಿವೃತ್ತ ಐಪಿಎಸ್ ಅಧಿಕಾರಿ ರಾಮ್ ನಾರಾಯಣ್ ಸಿಂಗ್ ಅವರ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ನೋಯ್ಡಾದ ನಿವೃತ್ತ ಐಪಿಎಸ್ ಅಧಿಕಾರಿ ಮನೆ ಮೇಲೆ ಐಟಿ ದಾಳಿ

author img

By

Published : Jan 31, 2022, 8:59 AM IST

ನೋಯ್ಡಾ(ಉತ್ತರ ಪ್ರದೇಶ): ನಿವೃತ್ತ ಐಪಿಎಸ್ ಅಧಿಕಾರಿ ರಾಮ್ ನಾರಾಯಣ್ ಸಿಂಗ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮೂಲಗಳ ಪ್ರಕಾರ, ನೋಯ್ಡಾದ ಸೆಕ್ಟರ್ 50ರಲ್ಲಿರುವ ಅವರ ನಿವಾಸದ ನೆಲಮಾಳಿಗೆಯಲ್ಲಿ ನಿರ್ಮಿಸಲಾದ ಲಾಕರ್‌ನಲ್ಲಿ ಅಪಾರ ಪ್ರಮಾಣದ ಕಪ್ಪು ಹಣ ಇರಿಸಲಾಗಿದೆ ಹಾಗೂ ನೆಲಮಾಳಿಗೆಯಲ್ಲಿ 650 ಲಾಕರ್‌ಗಳಿದ್ದು, ಅಘೋಷಿತ ನಗದು ಇರುವ ಬಗ್ಗೆ ಇಲಾಖೆಗೆ ಮಾಹಿತಿ ಲಭಿಸಿದೆ. ಹಾಗಾಗಿ 12 ಗಂಟೆಗೂ ಹೆಚ್ಚು ಕಾಲ ಐಟಿ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ.

ಏಕಕಾಲದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಯ್ಡಾ ಮತ್ತು ಗಾಜಿಯಾಬಾದ್‌ನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎನ್ನಲಾಗ್ತಿದೆ. ಐಟಿ ಇಲಾಖೆಯ ಮೂಲಗಳ ಪ್ರಕಾರ ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ ಮತ್ತು ಇದು ಕೇವಲ ಶೋಧ ಕಾರ್ಯಾಚರಣೆಯಾಗಿದೆ ಎಂದು ಅವರು ಹೇಳಿದ್ದಾರೆ. ಬೇನಾಮಿ ಆಸ್ತಿ ಹೊಂದಿರುವ ಬಗ್ಗೆ ಅವರು ಪರಿಶೀಲಿಸುತ್ತಿದ್ದಾರೆ. ಇನ್ನೂ ಶೋಧ ಕಾರ್ಯ ನಡೆಯುತ್ತಿದ್ದು, ಮನೆಯೊಳಗೆ ಏನೇನು ಪತ್ತೆಯಾಗಿದೆ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

ಇದನ್ನೂ ಓದಿ: ಪಂಜಾಬ್​ನಲ್ಲಿ ಕೈ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ: ಎರಡು ಕ್ಷೇತ್ರಗಳಿಂದ ಸಿಎಂ ಚನ್ನಿ ಸ್ಪರ್ಧೆ, ಕೇಜ್ರಿವಾಲ್ ವ್ಯಂಗ್ಯ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.