ETV Bharat / bharat

'ಬಿಜೆಪಿಗೆ ಬೇಕಿರೋದು ಕೇವಲ ಚುನಾವಣೆಗಳಲ್ಲಿನ ಗೆಲುವಷ್ಟೇ' : ಮೆಹಬೂಬಾ ಮುಫ್ತಿ ವಾಗ್ದಾಳಿ - Mehbooba Mufti and bjp

ಪ್ರಸ್ತುತ ಕೇಂದ್ರ ಸರ್ಕಾರದ ಕಳಪೆ ವಿದೇಶಾಂಗ ನೀತಿಯಿಂದಾಗಿ ಭಾರತವು ತನ್ನ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಗಡಿಯಲ್ಲಿ ಪ್ರತಿದಿನ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಅಸಡ್ಡೆ ತೋರುತ್ತಿದೆ..

Mehbooba Mufti
ಮೆಹಬೂಬಾ ಮುಫ್ತಿ
author img

By

Published : Jan 31, 2021, 8:58 PM IST

ಜಮ್ಮು ಕಾಶ್ಮೀರ : ಬಿಜೆಪಿಗೆ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದು ಬೇಕಿಲ್ಲ. ಅದಕ್ಕೆ ಬೇಕಿರುವುದು ಕೇವಲ ಚುನಾವಣೆಯಲ್ಲಿನ ಗೆಲುವು. ಅದೊಂದು ಚುನಾವಣೆಗೆ ಗೆಲುವು ಬಯಸುವ ಯಂತ್ರವಷ್ಟೇ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವ್ಯಂಗ್ಯವಾಡಿದ್ದಾರೆ.

ಪೂಂಚ್‌ನಲ್ಲಿ ನಡೆದ ಪಕ್ಷದ ಸಭೆಯ ನಂತರ ಮಾತನಾಡಿದ ಮುಫ್ತಿ, ಜಮ್ಮು ಮತ್ತು ಕಾಶ್ಮೀರದಂತಹ ಸುಂದರವಾದ ಸ್ಥಳವನ್ನು ಬಿಜೆಪಿ ಹಾಳು ಮಾಡಿದೆ. ಬಿಜೆಪಿಯಿಂದ ಇಲ್ಲಿ ಅವ್ಯವಸ್ಥೆಯ ವಾತಾವರಣವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡಲಾಗುತ್ತಿದೆ ಮತ್ತು ಸ್ಥಳೀಯೇತರ ನಾಗರಿಕರಿಗೆ ಉದ್ಯೋಗಗಳಲ್ಲಿ ಪಾಲು ನೀಡಲಾಗುತ್ತಿದೆ ಎಂದು ಕೂಡ ಮೆಹಬೂಬಾ ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರೊಂದಿಗೆ ಭಾರತದ ಸಂಬಂಧ ಹದಗೆಟ್ಟಿದೆ : ಭಾರತ ಹಾಗೂ ಬೇರೆ ದೇಶಗಳೊಂದಿಗಿನ ಸಂಬಂಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಮೆಹಬೂಬಾ ಮುಫ್ತಿ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಮಾತ್ರವಲ್ಲ, ನಮ್ಮ ಎಲ್ಲಾ ನೆರೆ ಹೊರೆಯವರೊಂದಿಗೆ ನಮ್ಮ ದೇಶದ ಸಂಬಂಧಗಳು ಹದಗೆಟ್ಟಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಪ್ರಸ್ತುತ ಕೇಂದ್ರ ಸರ್ಕಾರದ ಕಳಪೆ ವಿದೇಶಾಂಗ ನೀತಿಯಿಂದಾಗಿ ಭಾರತವು ತನ್ನ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಗಡಿಯಲ್ಲಿ ಪ್ರತಿದಿನ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಅಸಡ್ಡೆ ತೋರುತ್ತಿದೆ ಎಂದಿದ್ದಾರೆ.

ರೈತರ ಆಂದೋಲನವನ್ನು ವಿಫಲಗೊಳಿಸಲು ಕೇಂದ್ರ ಸರ್ಕಾರ ಪಿತೂರಿ ನಡೆಸುತ್ತಿದೆ. ಗಣರಾಜ್ಯೋತ್ಸವ ದಿನದಂದು ರೈತರನ್ನು ಕೆಣಕುವ ಪ್ರಯತ್ನ ನಡೆದಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.