ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಹಿರಿಯ ಐಪಿಎಸ್ ಅಧಿಕಾರಿ ಬಸಂತ್ ಕುಮಾರ್ ರಾಥ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದೆ ಚುನಾವಣಾ ರಾಜಕೀಯಕ್ಕೆ ಧುಮುಕುವ ನಿರೀಕ್ಷೆ ಇದೆ.
ಜಮ್ಮು-ಕಾಶ್ಮೀರದ ಕೇಡರ್ನ 2000ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾದ ಬಸಂತ್, ಪ್ರಸ್ತುತ ಐಜಿಪಿ ಶ್ರೇಣಿಯನ್ನು ಹೊಂದಿದ್ದರು. ಇದೀಗ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ಧಾರೆ. ಚುನಾವಣಾ ರಾಜಕೀಯದಲ್ಲಿ ಭಾಗವಹಿಸಲು ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ನೀಡಲು ನಾನು ಬಯಸಿದ್ದೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.
ನನ್ನ ರಾಜೀನಾಮೆ ಮತ್ತು ಸ್ವಯಂಪ್ರೇರಿತ ನಿವೃತ್ತಿಗಾಗಿ ನನ್ನ ಈ ರಾಜೀನಾಮೆ ಪತ್ರವನ್ನು ಪರಿಗಣಿಸಿ ಎಂದೂ ಅವರು ವಿನಂತಿಸಿಕೊಂಡಿದ್ದಾರೆ. ರಾಥ್ ಈ ಹಿಂದೆ ಹೆಚ್ಚು ವಿವಾದಕ್ಕೆ ಒಳಗಾಗಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ಇವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.
ಇದನ್ನೂ ಓದಿ: ವಾರಾಣಸಿಯಲ್ಲಿ ಸಿಎಂ ಯೋಗಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ