ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊರೊನಾ ವಿರುದ್ಧ ಮುಂಚೂಣಿಯಲ್ಲಿ ನಿಂತು ಅತ್ಯಧಿಕ ಪ್ರಮಾಣದಲ್ಲಿ ಲಸಿಕೆ ವಿತರಿಸಿದ ಮಹಿಳಾ ಆರೋಗ್ಯ ಸಿಬ್ಬಂದಿಯನ್ನು ಕೇಂದ್ರ ಸರ್ಕಾರ ಸನ್ಮಾನಿಸಿದೆ.
ಜಮ್ಮು ಕಾಶ್ಮೀರದಲ್ಲಿ ಲಸಿಕೆ ವಿತರಣಾ ಅಭಿಯಾನದಲ್ಲಿ ಕಾರ್ಯನಿರ್ವಹಿಸಿದ ಅಭಿಲಾಷಾ ಎಂಬುವವರು ಬರೋಬ್ಬರಿ 1,13,998 ಮಂದಿಗೆ ಲಸಿಕೆ ಹಾಕಿದ್ದು, ಅವರನ್ನು ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ ಸನ್ಮಾನಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಭಿಲಾಷಾ, ಆರಂಭದಲ್ಲಿ ಜನ ಲಸಿಕೆ ಪಡೆಯಲು ಮುಂದಾಗುತ್ತಿರಲಿಲ್ಲ. ಲಸಿಕೆ ವಿತರಣೆಯೇ ಸವಾಲಾಗಿತ್ತು. ಈ ವೇಳೆ ಲಸಿಕೆಯ ಲಾಭಗಳ ಬಗ್ಗೆ ಅರಿವು ಮೂಡಿಸಿದ ಬಳಿಕ ಜನರು ಬರಲು ಆರಂಭಿಸಿದರು ಎಂದರು.
ಲಸಿಕಾ ಅಭಯಾನ ಆರಂಭದಿಂದ ಈವರೆಗೂ 1.13 ಲಕ್ಷ ಮಂದಿಗೆ ನಾನು ಕೊರೊನಾ ಲಸಿಕೆ ಹಾಕಿದ್ದೇನೆ ಎಂದ ಅವರು, ಕೇಂದ್ರ ಸರ್ಕಾರದ ಲಸಿಕಾ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ಸೂಚಿಸಿದರು.
ಇದನ್ನೂ ಓದಿ: ರಷ್ಯಾದಿಂದ ತೈಲ, ನೈಸರ್ಗಿಕ ಅನಿಲ ಖರೀದಿ ಸ್ಥಗಿತ: ಶೆಲ್ ಘೋಷಣೆ