ETV Bharat / bharat

ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಕಂದಕಕ್ಕೆ ಬಿದ್ದ ಕ್ಯಾಬ್​: ಕೇರಳದ ನಾಲ್ವರು ಪ್ರವಾಸಿಗರು ಸಾವು - ಕಾಶ್ಮೀರದಲ್ಲಿ ಕೇರಳ ಪ್ರವಾಸಿಗರು ಸಾವು

Cab falls into deep gorge at Srinagar-Leh highway: ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಬ್ ಕಂದಕಕ್ಕೆ ಉರುಳಿಬಿದ್ದು ಕೇರಳ ಮೂಲದ ನಾಲ್ವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ.

J-K: Cab carrying tourists falls from mountain highway, four killed
ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಕಂದಕಕ್ಕೆ ಬಿದ್ದ ಕ್ಯಾಬ್​: ಕೇರಳದ ನಾಲ್ವರು ಪ್ರವಾಸಿಗರು ಸಾವು
author img

By ETV Bharat Karnataka Team

Published : Dec 5, 2023, 9:08 PM IST

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ಯಾಬ್​ ಕಂದಕಕ್ಕೆ ಉರುಳಿ ಬಿದ್ದು ನಾಲ್ವರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ. ಮೃತರೆಲ್ಲರೂ ಕೇರಳದವರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮತ್ತೆ ಕೆಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಝೋಜಿಲ್ಲಾ ಪಾಸ್​ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಬ್ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರ-ಲೇಹ್ ಹೆದ್ದಾರಿ ಮೂಲಕ ಪ್ರವಾಸಿಗರು ಸೋನಾಮಾರ್ಗ್‌ಗೆ ತೆರಳುತ್ತಿದ್ದರು. ಮೃತರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ.

ಮತ್ತೊಂದೆಡೆ, ಗಾಯಾಳುಗಳನ್ನು ಸೋನಾಮಾರ್ಗ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಇವರಲ್ಲಿ ಒಬ್ಬರನ್ನು ವಿಶೇಷ ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ರವಾನಿಸಲಾಗಿದೆ. ನಾಪತ್ತೆಯಾದವರ ಪತ್ತೆಗಾಗಿ ರಕ್ಷಣಾ ಮತ್ತು ಶೋಧ ತಂಡಗಳು ಅಪಘಾತ ನಡೆದ ಸ್ಥಳಕ್ಕೆ ದೌಡಾಯಿಸಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಂದಕಕ್ಕೆ ಉರುಳಿದ ಪ್ರವಾಸಿ ಟೆಂಪೋ ಟ್ರಾವೆಲರ್: ಇಬ್ಬರು ಪ್ರವಾಸಿಗರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.