ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಪೋಶ್ವಾನ್ ಪ್ರದೇಶದಲ್ಲಿ ಭಯೋತ್ಪಾದಕರು ಶನಿವಾರ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭಯೋತ್ಪಾದಕರ ದುಷ್ಕೃತ್ಯದ ವೇಳೆ ಓರ್ವ ಪೊಲೀಸ್ ಹುತಾತ್ಮರಾಗಿದ್ದು, ಇತರ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ.
ಕಾನ್ಸ್ಟೇಬಲ್ ನಿಸಾರ್ ಅಹ್ಮದ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಗಾಯಗೊಂಡ ಸಿಬ್ಬಂದಿಯ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಪ್ರಕಾರ, ಟ್ರಾಫಿಕ್ ನಿರ್ವಹಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರಿಂದ ದಾಳಿ ನಡೆದಿದೆ. ಸದ್ಯ ಸ್ಥಳದಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದ್ದು, ಉಗ್ರರ ಶೋಧ ಕಾರ್ಯಾಚರಣೆ ಮುಂದುವರೆದಿದೆ.