ಸೋಪಿಯಾನ(ಜಮ್ಮು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮಿಶಿಜಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಎಎಸ್ಐ ಶಬೀರ್ ಅಹ್ಮದ್ ಅವರು ಶೋಪಿಯಾನ್‌ನ ಅಮಿಶಿಜಿಪೋರಾ ಪ್ರದೇಶದಲ್ಲಿ ಪ್ರಾರ್ಥನೆ ಮುಗಿಸಿ ಮಸೀದಿಯಿಂದ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಪೊಲೀಸರು ಸೇನೆಯ ನೆರವಿನಿಂದ ಈ ಪ್ರದೇಶ ಸುತ್ತುವರಿದಿತ್ತು. ಈ ವೇಳೆ ಸುತ್ತಮುತ್ತಲ ಪ್ರದೇಶ ಸುತ್ತುವರಿದ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.
ಇದನ್ನು ಓದಿ: ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ.. ಸರ್ಕಾರದ ಒಪ್ಪಿಗೆಗೆ ಕಾಯುತ್ತಿರುವ ಫೈಜರ್!