ETV Bharat / bharat

ಮದುವೆಗೆ ಕೆಲ ಗಂಟೆ ಮಾತ್ರ ಬಾಕಿ.. ರೇಪ್​ ಕೇಸ್​ನಲ್ಲಿ ವರನನ್ನೇ ಎತ್ತಾಕ್ಕೊಂಡು ಹೋದ ಪೊಲೀಸರು! - ವರನ ಬಂಧನ

ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನೋರ್ವ ಬೇರೊಂದು ಮದುವೆ ಮಾಡಿಕೊಳ್ಳಲು ಮುಂದಾಗಿದ್ದನು. ಈ ವೇಳೆ ಕಾರ್ಯಪ್ರವೃತ್ತರಾದ ಪೊಲೀಸರು ಆತನ ಬಂಧನ ಮಾಡಿದ್ದಾರೆ..

Police Arrested Groom In Katni
Police Arrested Groom In Katni
author img

By

Published : Apr 16, 2022, 8:01 PM IST

ಜಬಲ್ಪುರ್(ಮಧ್ಯಪ್ರದೇಶ): ಮದುವೆಗೆ ಎಲ್ಲ ರೀತಿಯ ತಯಾರಿ ನಡೆದಿತ್ತು. ವರನನ್ನ ಮೆರವಣಿಗೆ ಮಾಡಿಸಿ, ಮದುವೆ ಮಂಟಪಕ್ಕೆ ಕರೆದುಕೊಂಡು ಹೋಗಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕಾಗಮಿಸಿರುವ ಪೊಲೀಸರು ಆತನನ್ನ ಎತ್ತಾಕ್ಕೊಂಡು ಹೋಗಿದ್ದಾರೆ. ಮಧ್ಯಪ್ರದೇಶದ ಕಟ್ನಿಯಲ್ಲಿ ಈ ಘಟನೆ ನಡೆದಿದೆ.

ತಾಳ್ಳಿ ಕಟ್ಟುವುದಕ್ಕೂ ಮುಂಚಿತವಾಗಿ ಮೆರವಣಿಗೆ ಹೊರಡಲು ತಯಾರಾಗುತ್ತಿದ್ದ ವರನನ್ನ ಅತ್ಯಾಚಾರ ಆರೋಪದ ಮೇಲೆ ಜಬಲ್ಪುರ್​ ಪೊಲೀಸರು ಬಂಧಿಸಿದ್ದಾರೆ. ಮದುವೆ ಮಾಡಿಕೊಳ್ಳುವ ನೆಪದಲ್ಲಿ ತನ್ನ ಸ್ನೇಹಿತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಈತನ ಮೇಲೆ ಕೇಳಿ ಬಂದಿದೆ.

ಜಬಲ್ಪುರ್​​ ಲಾರ್ಡ್​ಗಂಜ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಮದುವೆಯಾಗುವುದಾಗಿ ನಂಬಿಸಿ, ಹೋಟೆಲ್​ಗೆ ಕರೆದುಕೊಂಡು ಹೋಗಿ, ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆಂದು ಯುವತಿ ದೂರು ನೀಡಿದ್ದಳು.

ಇದನ್ನೂ ಓದಿ: ಪಿಎಸ್ಐ ಪರೀಕ್ಷೆ ಅಕ್ರಮ : ಮೂವರು ಮಹಿಳಾ ಮೇಲ್ವಿಚಾರಕಿಯರು ಸೇರಿ 6 ಜನ ಅರೆಸ್ಟ್​

ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ಪ್ರಫುಲ್ ಶ್ರೀವಾಸ್ತವ್, ಅನುಜ್ ದುಬೆ ತನ್ನ ಸ್ನೇಹಿತೆ ಮೇಲೆ ಕಳೆದ ಕೆಲ ತಿಂಗಳ ಹಿಂದೆ ಅತ್ಯಾಚಾರವೆಸಗಿದ್ದಾಗಿ ಪ್ರಕರಣ ದಾಖಲಾಗಿತ್ತು. ಹುಡುಗಿ ಜೊತೆ ದೇವಸ್ಥಾನವೊಂದರಲ್ಲಿ ಮದುವೆ ಮಾಡಿಕೊಂಡಿದ್ದನಂತೆ.

ಇದರ ಬೆನ್ನಲ್ಲೇ ಹೋಟೆಲ್​ವೊಂದಕ್ಕೆ ಕರೆದುಕೊಂಡು ಹೋಗಿ, ಆತನ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ತದನಂತರ, ಬೇರೆ ಯುವತಿ ಜೊತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದನು. ಇದಕ್ಕೆ ಸಂಬಂಧಿಸಿದಂತೆ ಹುಡುಗಿ ದೂರು ದಾಖಲು ಮಾಡಿದ್ದಳು.

ಏಪ್ರಿಲ್ 15ರಂದು ಯುವಕ ಮದುವೆ ಮಾಡಿಕೊಳ್ಳಲು ಮುಂದಾಗಿರುವ ವಿಷಯ ಗೊತ್ತಾಗುತ್ತಿದ್ದಂತೆ ನಾನು ಸ್ಥಳಕ್ಕೆ ತೆರಳಿ, ಆತನ ಬಂಧನ ಮಾಡಿದ್ದು, ವಿಚಾರಣೆ ನಡೆಸಲಿದ್ದೇವೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.