ಮಿರ್ಜಾಪುರ(ಉತ್ತರ ಪ್ರದೇಶ): ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಜಗದ್ಗುರು ರಾಮಭದ್ರಾಚಾರ್ಯ ಅವರ ಉತ್ತರಾಧಿಕಾರಿ ಜೈಮಿಶ್ರಾ ವಿರುದ್ಧ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ತುಳಸಿಪೀಠ ಸಂಸ್ಥೆಯ ವಿದ್ಯಾರ್ಥಿನಿ ಈ ಗಂಭೀರ ಆರೋಪ ಮಾಡಿದ್ದಾರೆ.
ಸಂತ್ರಸ್ತೆ ಘಟನೆಗೆ ಸಂಬಂಧಿಸಿದಂತೆ ಮನೆಯಲ್ಲಿ ಕುಟುಂಬಸ್ಥರ ಮುಂದೆ ಮಾಹಿತಿ ಹಂಚಿಕೊಂಡಿದ್ದು, ವಿದ್ಯಾರ್ಥಿನಿಯ ತಂದೆ ಲಾಲ್ಗಂಜ್ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯ ವಿದ್ಯಾರ್ಥಿನಿ ತುಳಸಿಪೀಠ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದು, ಫೆ. 14ರಂದು ತನ್ನ ಮೇಲೆ ತುಳಸಿಪೀಠದ ಉತ್ತರಾಧಿಕಾರಿ ಜೈ ಮಿಶ್ರಾ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆಂಬ ಆರೋಪ ಮಾಡಿದ್ದಾರೆಂದು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೂರು ದಾಖಲು ಮಾಡಿದ್ರೆ, ಕೊಲೆ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದಾಗಿ ತಿಳಿಸಿದ್ದಾರೆ.
ಇದನ್ನೂ ಓದಿರಿ: ಮಣಿಪುರ ವಿಧಾನಸಭೆ ಫೈಟ್: ಶೇ. 78ರಷ್ಟು ಮತದಾನ; 173 ಅಭ್ಯರ್ಥಿಗಳ ಭವಿಷ್ಯ ಭದ್ರ
ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಪೋಷಕರ ಮುಂದೆ ಹೇಳಿಕೊಂಡಿದ್ದು, ಫೆಬ್ರವರಿ 27ರಂದು ಮಿರ್ಜಾಪುರ ಲಾಲ್ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಎಫ್ಐಆರ್ ದಾಖಲು ಮಾಡಿಕೊಂಡಿರುವ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆಂದು ತಿಳಿದು ಬಂದಿದೆ.