ಲಖನೌ(ಉತ್ತರ ಪ್ರದೇಶ): ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಜಹಾಂಗಿರ್ಪುರಿಯಲ್ಲಿ ನಡೆದ ಭೀಕರ ಹಿಂಸಾಚಾರ ಅನೇಕ ವಿವಾದಗಳಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚೆತ್ತುಕೊಂಡಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ಮಹತ್ವದ ಆದೇಶ ಹೊರಡಿಸಿದ್ದಾರೆ.
-
कोई शोभायात्रा/धार्मिक जुलूस बिना विधिवत अनुमति के न निकाली जाए। अनुमति से पूर्व आयोजक से शांति-सौहार्द कायम रखने के संबंध में शपथ पत्र लिया जाए।
— CM Office, GoUP (@CMOfficeUP) April 18, 2022 " class="align-text-top noRightClick twitterSection" data="
अनुमति केवल उन्हीं धार्मिक जुलूसों को दिया जाए, जो पारंपरिक हों, नए आयोजनों को अनावश्यक अनुमति न दी जाए:#UPCM श्री @myogiadityanath जी
">कोई शोभायात्रा/धार्मिक जुलूस बिना विधिवत अनुमति के न निकाली जाए। अनुमति से पूर्व आयोजक से शांति-सौहार्द कायम रखने के संबंध में शपथ पत्र लिया जाए।
— CM Office, GoUP (@CMOfficeUP) April 18, 2022
अनुमति केवल उन्हीं धार्मिक जुलूसों को दिया जाए, जो पारंपरिक हों, नए आयोजनों को अनावश्यक अनुमति न दी जाए:#UPCM श्री @myogiadityanath जीकोई शोभायात्रा/धार्मिक जुलूस बिना विधिवत अनुमति के न निकाली जाए। अनुमति से पूर्व आयोजक से शांति-सौहार्द कायम रखने के संबंध में शपथ पत्र लिया जाए।
— CM Office, GoUP (@CMOfficeUP) April 18, 2022
अनुमति केवल उन्हीं धार्मिक जुलूसों को दिया जाए, जो पारंपरिक हों, नए आयोजनों को अनावश्यक अनुमति न दी जाए:#UPCM श्री @myogiadityanath जी
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ವಿಚಾರವಾಗಿ ಪ್ರಮುಖ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಅವರು, ಯಾವುದೇ ರೀತಿಯ ಧಾರ್ಮಿಕ ಮೆರವಣಿಗೆ ನಡೆಸಲು ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಿಎಂ, ಸರ್ಕಾರದ ಅನುಮತಿ ಇಲ್ಲದೇ ಯಾವುದೇ ರೀತಿಯ ಮೆರವಣಿಗೆ, ಶೋಭಾಯಾತ್ರೆ ನಡೆಸುವಂತಿಲ್ಲ. ಅನುಮತಿ ನೀಡುವ ಮೊದಲು ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಬಗ್ಗೆ ಸಂಘಟಕರಿಂದ ಅಫಿಡವಿಟ್ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದು, ಸಾಂಪ್ರದಾಯಿಕ ಧಾರ್ಮಿಕ ಮೆರವಣಿಗೆಗಳಿಗೆ ಮಾತ್ರ ಅನುಮತಿ ನೀಡಬೇಕು ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಪ್ರತಿಯೊಬ್ಬ ನಾಗರಿಕನ ಸುರಕ್ಷತೆ ಸರ್ಕಾರದ ಪ್ರಾಥಮಿಕ ಜವಾಬ್ದಾರಿಯಾಗಿದೆ. ಹೊಸದಾಗಿ ಆಯೋಜನೆಗೊಳ್ಳುವ ಯಾವುದೇ ಕಾರ್ಯಕ್ರಮಗಳಿಗೆ ಇದೀಗ ಅನುಮತಿ ನೀಡಲು ಸಾಧ್ಯವಿಲ್ಲ. ಧಾರ್ಮಿಕ ಮೆರವಣಿಗೆ ಗೊತ್ತುಪಡಿಸಿದ ಸ್ಥಳ ಮತ್ತು ರಸ್ತೆಗಳ ಮೂಲಕ ಮಾತ್ರವೇ ಸಾಗಬೇಕು ಎಂದಿದ್ದಾರೆ.
ಇದನ್ನೂ ಓದಿ: ದಲಿತ ವಿದ್ಯಾರ್ಥಿಗೆ ಬೆಲ್ಟ್, ಕೇಬಲ್ನಿಂದ ಥಳಿಸಿ, ಕಾಲು ನೆಕ್ಕಿಸಿದರು! ವಿಡಿಯೋ
ಮುಂಬರುವ ದಿನಗಳಲ್ಲಿ ಅಕ್ಷಯ ತೃತೀಯ ಮತ್ತು ಈದ್ ಹಬ್ಬ ಒಂದೇ ದಿನ ಬರುವ ಕಾರಣ ಇದಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ದೇಶನ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಸರ್ಕಾರಿ ರಜಾ ದಿನದಂದು ಎಲ್ಲ ಪೊಲೀಸ್ ಅಧಿಕಾರಿಗಳ ರಜೆ ರದ್ದು ಮಾಡಲಾಗಿದೆ.