ಶ್ರೀನಗರ: ಭಾರತವು ಈ ವರ್ಷದ ಡಿಸೆಂಬರ್ನಲ್ಲಿ ಜಿ 20ಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ. ಅದರ ಸಭೆಗಳು 2023 ರ ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿದೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ವರ್ಷದ ಜೂನ್ನಲ್ಲಿ ಎಸ್ಕೆಐಸಿಸಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಶ್ರೀನಗರದಲ್ಲಿ G-20 ಶೃಂಗಸಭೆಯನ್ನು ಆಯೋಜಿಸಲಾಗುವುದು. ಇದು ನಮಗೆ ಹೆಮ್ಮೆಯ ವಿಷಯವಾಗಿದೆ. ಅಲ್ಲದೇ ಆಡಳಿತವು ಅದನ್ನು ನಡೆಸಲು ಸಮಿತಿಯನ್ನು ರಚಿಸಿದೆ ಎಂದು ಹೇಳಿದ್ದರು.
ಇದನ್ನೂ ಓದಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಮ್ಮು- ಕಾಶ್ಮೀರ ಪ್ರವಾಸ.. ಐಐಟಿ ಸಮಾವೇಶದಲ್ಲಿ ಭಾಗಿ
ವಿದೇಶಾಂಗ ವ್ಯವಹಾರಗಳ ಸಚಿವಾಲಯವು 2023 ರ ಸೆಪ್ಟಂಬರ್ನಲ್ಲಿ ದೆಹಲಿಯಲ್ಲಿ G20 ಸಭೆಗಳನ್ನು ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಯುರೋಪಿಯನ್ ರಾಷ್ಟ್ರಗಳ ಜೊತೆಗೆ ಹತ್ತೊಂಬತ್ತು ದೇಶಗಳನ್ನು ಜಿ20 ಹೊಂದಿದೆ. ಈ ಸಭೆಯ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಜೂನ್ನಲ್ಲಿ ಐದು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು.