ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಜಮ್ಮು- ಕಾಶ್ಮೀರ, ರಂಬನ್ ಪ್ರದೇಶದ 14 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಲಷ್ಕರ್-ಎ-ಮುಸ್ತಾಫ ಸಂಘಟನೆಯ ಮುಖ್ಯಸ್ಥ ಹಿದಾಯತ್ ಉಲ್ಲಾ ಮಲಿಕ್ನನ್ನು ಬಂಧಿಸಲಾಗಿದ್ದು, ಐದು ಕೆ.ಜಿ ಐಇಡಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಅಸ್ಸೋಂ-ಮಿಜೋರಾಂ ಗಡಿ ಘರ್ಷಣೆ ಪ್ರಕರಣ: ಸಿಎಂ, ಎಂಪಿ, ಡಿಐಜಿ ಸೇರಿ ಹಲವರ ವಿರುದ್ಧ ಪ್ರಕರಣ
ಐಇಡಿ ನಾಶ ಪಡಿಸಿದ ಬಾಂಬ್ ನಿಷ್ಕ್ರಿಯ ದಳ
ಮತ್ತೊಂದೆಡೆ ರಜೌರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಧಾರಿತ ಸ್ಫೋಟಕ ವಸ್ತು (IED) ಕಂಡು ಬಂದಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಐಇಡಿಯನ್ನು ನಾಶಪಡಿಸಿದೆ ಎಂದು ಮೂಲಗಳು ತಿಳಿಸಿವೆ.