ನವದೆಹಲಿ: ಜನವರಿ 26ರ ಟ್ರ್ಯಾಕ್ಟರ್ ಸಮಾವೇಶದ ಹಿಂಸಾಚಾರದ ಆರೋಪಿ ಪಂಜಾಬಿ ನಟ-ಕಾರ್ಯಕರ್ತ ದೀಪ್ ಸಿಧು ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಏಪ್ರಿಲ್ 8ರಂದು ನಡೆಸಲಿದೆ.
ನ್ಯಾಯ ವ್ಯಾಪ್ತಿಯ ಸಮಸ್ಯೆ ಉದ್ಭವಿಸಿದ ನಂತರ ಸಿಧು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ತೀಸ್ ಹಜಾರಿ ನ್ಯಾಯಾಲಯ ಮುಂದೂಡಿದೆ.
ಗಣರಾಜ್ಯೋತ್ಸವದಂದು ಕೆಂಪು ಕೋಟೆ ಬಳಿ ಹಿಂಸಾಚಾರ ಪ್ರಚೋದಿಸಿದ ಆರೋಪ ಹೊತ್ತಿರುವ ಸಿಧು ಮಂಗಳವಾರ ತನ್ನ ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಜನವರಿ 26ರಂದು ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ದೆಹಲಿ ಪೊಲೀಸರು ನಟ-ಕಾರ್ಯಕರ್ತ ದೀಪ್ ಸಿಧು ಅವರನ್ನು ಬಂಧಿಸಿದ್ದರು.
ಇದನ್ನೂ ಓದಿ: ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿರುವ ಬಿಜೆಪಿ ಸಂಸದೆ ಕಿರಣ್ ಖೇರ್
ಜನವರಿ 26ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾದ ಎಫ್‌ಐಆರ್‌ನಲ್ಲಿ ಪಂಜಾಬಿ ನಟ ದೀಪ್ ಸಿಧು ಮತ್ತು ಲಕ್ಕಾ ಸದಾನಾ ಅವರ ಹೆಸರುಗಳನ್ನು ಸೇರಿಸಲಾಗಿದೆ ಎಂದು ದೆಹಲಿ ಪೊಲೀಸರು ಈ ಹಿಂದೆ ತಿಳಿಸಿದ್ದರು.