ETV Bharat / bharat

ದೆಹಲಿಗೆ ಜಪಾನ್ ಪ್ರಧಾನಿ ಆಗಮನ: ಪಂಚೆಯುಟ್ಟು ಸಾಂಪ್ರದಾಯಿಕವಾಗಿ ಸ್ವಾಗತಿಸಿದ ಸಚಿವ ರಾಜೀವ್ ಚಂದ್ರಶೇಖರ್

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದರು.

author img

By

Published : Mar 20, 2023, 9:38 AM IST

Updated : Mar 20, 2023, 10:05 AM IST

Fumio Kishida
ಫ್ಯೂಮಿಯೊ ಕಿಶಿಡಾ
ಜಪಾನ್ ಪ್ರಧಾನಿ ಸ್ವಾಗತಿಸಿದ ಸಚಿವ ರಾಜೀವ್ ಚಂದ್ರಶೇಖರ್

ನವದೆಹಲಿ: ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಎರಡು ದಿನಗಳ ಭಾರತ ಪ್ರವಾಸದ ಅಂಗವಾಗಿ ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದರು. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಜಪಾನ್ ಪಿಎಂ ಅವರನ್ನು ವಿಮಾನ ನಿಲ್ದಾಣದಲ್ಲಿ ಆದರದಿಂದ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜೀವ್ ಚಂದ್ರಶೇಖರ್ ಬಿಳಿ ಪಂಚೆಯಲ್ಲಿ ಕಂಡುಬಂದರು. ಕಿಶಿಡಾ ಭೇಟಿಯು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಲು ಉತ್ತಮ ಅವಕಾಶವಾಗಿದೆ.

ಭೇಟಿಯ ಮಹತ್ವವೇನು?: ಭಾರತ ಮತ್ತು ಜಪಾನ್ ನಡುವೆ ಮಾರ್ಚ್ 2022 ರಲ್ಲಿ ನಡೆದ ಕೊನೆಯ ಶೃಂಗಸಭೆಯ ನಂತರ ದೆಹಲಿ ಮತ್ತು ಟೋಕಿಯೋ ಕ್ರಮವಾಗಿ G20 ಮತ್ತು G7 ನ ಅಧ್ಯಕ್ಷ ಸ್ಥಾನಗಳನ್ನು ಹೊಂದಿವೆ. ಹೀಗಾಗಿ, ಈ ಬಾರಿಯ ಜಪಾನ್​ ಪಿಎಂ ಭಾರತ ಭೇಟಿಯು ಮಹತ್ವದ್ದಾಗಿದೆ. ಜೊತೆಗೆ, ಉಚಿತ ಮತ್ತು ಮುಕ್ತ ಇಂಡೋ-ಪೆಸಿಫಿಕ್ ಕುರಿತು ಹೊಸ ಯೋಜನೆ ಪ್ರಕಟಿಸುವ ಸಾಧ್ಯತೆಯೂ ಇದೆ.

ಈ ಕುರಿತು ಟ್ವೀಟ್​ ಮಾಡಿರುವ ಜಪಾನ್ ಪಿಎಂಒ, "ಈ ವರ್ಷ ಜಪಾನ್ ದೇಶವು ಜಿ 7 ಅಧ್ಯಕ್ಷ ಸ್ಥಾನವನ್ನು ಹೊಂದಿದ್ದು, ಭಾರತವು ಜಿ 20 ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದೆ. ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಸವಾಲುಗಳನ್ನು ಪರಿಹರಿಸಲು ಉಭಯ ದೇಶಗಳು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಫ್ಯೂಮಿಯೊ ಕಿಶಿಡಾ ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ" ಎಂದು ತಿಳಿಸಿದೆ.

  • Japanese Prime Minister Fumio Kishida arrives in Delhi on a two-day visit.

    Union Minister Rajeev Chandrasekhar receives PM Fumio Kishida. pic.twitter.com/JjUfcmB5b6

    — ANI (@ANI) March 20, 2023 " class="align-text-top noRightClick twitterSection" data=" ">

ಪ್ರಧಾನಮಂತ್ರಿಯವರ ಕಾರ್ಯಾಲಯವು, "ಭಾರತ ಮತ್ತು ಜಪಾನ್ ನಡುವಿನ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಉದ್ದೇಶಿಸಲಾಗಿದೆ. ಜೊತೆಗೆ, ಉಚಿತ ಮತ್ತು ಮುಕ್ತ ಇಂಡೋ-ಪೆಸಿಫಿಕ್​ಗೆ ಸಂಬಂಧಿಸಿದ ಹೊಸ ಯೋಜನೆಯನ್ನು ಪ್ರಕಟಿಸಲಾಗುವುದು. ಜೊತೆಗೆ ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಶಿಕ್ಷಣ, ಆರೋಗ್ಯ, ಮತ್ತು ಉದಯೋನ್ಮುಖ ತಂತ್ರಜ್ಞಾನಗಳಂತಹ ಬಹು ಕ್ಷೇತ್ರಗಳಲ್ಲಿ ಎರಡೂ ದೇಶಗಳ ನಡುವಿನ ಪಾಲುದಾರಿಕೆ ಇದ್ದು, ಈ ಕುರಿತು ಸಹ ಚರ್ಚೆ ನಡೆಸುವುದಾಗಿ ಹೇಳಿದೆ.

ಇದನ್ನೂ ಓದಿ: ಮೋದಿ, ಮೋದಿ; ಜೈ ಶ್ರೀರಾಮ್​... ಟೋಕಿಯೋದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ

ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ, "ಜಪಾನ್ ದೇಶವು ಭಾರತಕ್ಕೆ ಅತ್ಯಂತ ಪ್ರಮುಖ ಪಾಲುದಾರ ರಾಷ್ಟ್ರ. ಸೋಮವಾರದಂದು ಜಪಾನ್‌ನ ಗೌರವಾನ್ವಿತ ಪ್ರಧಾನ ಮಂತ್ರಿಗಳು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ವರ್ಷ ಜಪಾನ್‌ಗೆ ಪ್ರಧಾನಿ ನರೇಂದ್ರ ಮೋದಿ ಹೋಗಿದ್ದರು. ಕಿಶಿದಾ ಕೂಡ ಇಲ್ಲಿಗೆ ಬಂದಿದ್ದರು. ಅಂದು ಚರ್ಚೆ ನಡೆಸಿದ್ದ ವಿಚಾರಗಳನ್ನು ಮುಂದಕ್ಕೆ ಕೊಂಡೊಯ್ಯಲು ಮತ್ತು ಅನೇಕ ಅಭಿಪ್ರಾಯಗಳ ವಿನಿಮಯ ಮಾಡಿಕೊಳ್ಳಲು ಎದುರು ನೋಡುತ್ತಿದೆ" ಎಂದು ಹೇಳಿದ್ದರು.

"ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಮಾರ್ಚ್ 20-21 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಪ್ರವಾಸದ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಚರ್ಚಿಸಲಿದ್ದಾರೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾರ್ಚ್ 10 ರಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

Last Updated : Mar 20, 2023, 10:05 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.