ಬಲಂಗೀರ್(ಒಡಿಶಾ): ಇಲ್ಲಿನ ಅಗಲ್ಪುರ ಬಾಲಕರ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟದ ವೇಳೆ ವಿದ್ಯಾರ್ಥಿಯೊಬ್ಬನ ಕುತ್ತಿಗೆಗೆ ಚಾವೆಲಿನ್ ಚುಚ್ಚಿರುವ ಘಟನೆ ನಡೆದಿದೆ.
ಶಾಲೆಯಲ್ಲಿ ನಡೆಯಲಿರುವ ವಾರ್ಷಿಕ ಕ್ರೀಡಾಕೂಟದ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳನ್ನು ಅಭ್ಯಸಿಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಜಾವೆಲಿನ್ ತ್ರೋ ಮಾಡಿದ್ದು, ದುರದೃಷ್ಟವಶಾತ್ ಮೈದಾನದಲ್ಲಿದ್ದ 9 ನೇ ತರಗತಿ ವಿದ್ಯಾರ್ಥಿ ಸದಾನಂದ ಮೆಹರ್ ಕುತ್ತಿಗೆಗೆ ಚುಚ್ಚಿದೆ.
ತಕ್ಷಣವೇ ಆತನನ್ನು ಭಿಮಾ ಭೋಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.
ಇದನ್ನೂ ಓದಿ:ಕಾಲೇಜಿಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದ ನವ ವಿವಾಹಿತೆ ನದಿಯಲ್ಲಿ ಶವವಾಗಿ ಪತ್ತೆ