ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಪ್ರಾನ್ ಪ್ರದೇಶದಲ್ಲಿ ಇಂದು (ಶುಕ್ರವಾರ) ಮುಂಜಾನೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ. ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಕಮ್ರಾನ್ ಭಾಯ್ ಅಲಿಯಾಸ್ ಹನೀಸ್ ಎಂಬ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
-
One FT of JeM #terror outfit killed, identified as Kamran Bhai @ Hanees who was active in #Kulgam-#Shopian area. Search is still going on: ADGP Kashmir@JmuKmrPolice https://t.co/v8P0CFkUrp
— Kashmir Zone Police (@KashmirPolice) November 11, 2022 " class="align-text-top noRightClick twitterSection" data="
">One FT of JeM #terror outfit killed, identified as Kamran Bhai @ Hanees who was active in #Kulgam-#Shopian area. Search is still going on: ADGP Kashmir@JmuKmrPolice https://t.co/v8P0CFkUrp
— Kashmir Zone Police (@KashmirPolice) November 11, 2022One FT of JeM #terror outfit killed, identified as Kamran Bhai @ Hanees who was active in #Kulgam-#Shopian area. Search is still going on: ADGP Kashmir@JmuKmrPolice https://t.co/v8P0CFkUrp
— Kashmir Zone Police (@KashmirPolice) November 11, 2022
ವರದಿಗಳ ಪ್ರಕಾರ, ಕಪ್ರಾನ್ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಸೇನೆಯ 34 ರಾಷ್ಟ್ರೀಯ ರೈಫಲ್ಸ್ ತಂಡ ಮತ್ತು ಸ್ಥಳೀಯ ಪೊಲೀಸರು ಬೆಳಗ್ಗೆ ಈ ಪ್ರದೇಶವನ್ನು ಸುತ್ತುವರೆದು ಶೋಧಿಸಿದ್ದಾರೆ. ಈ ನಡುವೆ ವಸತಿ ಗೃಹದಲ್ಲಿದ್ದ ಉಗ್ರರು, ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು.
ಹೆಚ್ಚಿನ ಶೋಧ ನಡೆಯುತ್ತಿರುವುದರಿಂದ ಸ್ಥಳೀಯ ಪೊಲೀಸ್ ಸಿಬ್ಬಂದಿ ಮತ್ತು ಭದ್ರತಾ ಪಡೆಗಳು ಸ್ಥಳದಲ್ಲಿದ್ದಾರೆ. ಮತ್ತಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಶ್ಮೀರದ ಅರಣ್ಯ ಪ್ರದೇಶದಲ್ಲಿ ಮೂವರು ಉಗ್ರರ ಎನ್‌ಕೌಂಟರ್ ಮಾಡಿದ ಸೇನೆ