ಶ್ರೀನಗರ(ಜಮ್ಮು ಕಾಶ್ಮೀರ): ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದಾಗಿನಿಂದ ಕಣಿವೆ ನಾಡು ಜಮ್ಮು ಕಾಶ್ಮೀರದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಈಗ ಶೈಕ್ಷಣಿಕ ಸಂಸ್ಥೆಗಳು, ಸರ್ಕಾರಿ ಕಟ್ಟಡಗಳು, ರಸ್ತೆಗಳ ವಿಚಾರವಾಗಿ ಅಲ್ಲಿನ ಸರ್ಕಾರ ಹೊಸ ನಿರ್ಧಾರವೊಂದನ್ನು ತೆಗೆದುಕೊಂಡಿದೆ.
ಹೌದು, ಸುಮಾರು 76 ಸರ್ಕಾರಿ ಶಾಲೆಗಳು, ಕಾಲೇಜುಗಳು, ರಸ್ತೆಗಳಿಗೆ ಜಮ್ಮು ಕಾಶ್ಮೀರ ಸರ್ಕಾರ ಮರುನಾಮಕರಣ ಮಾಡಲು ಮುಂದಾಗಿದ್ದು, ಇಂದಿನಿಂದ ಮರುನಾಮಕರಣ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜನರಲ್ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ ಈ ನಿರ್ಧಾರ ಕೈಗೊಂಡಿದ್ದು, ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಮೃತಪಟ್ಟ ಯೋಧರು, ಪೊಲೀಸರು, ಅಧಿಕಾರಿಗಳು ಮತ್ತು ಶ್ರೇಷ್ಠ ವ್ಯಕ್ತಿಗಳ ಹೆಸರನ್ನು ಅಲ್ಲಿನ ರಸ್ತೆ, ಕಾಲೇಜುಗಳು, ಸಾಹಿತಿಗಳು ಮುಂತಾದ ಸರ್ಕಾರಿ ರಚನೆಗಳಿಗೆ ಇಡಲಾಗುತ್ತದೆ.
2019 ಆಗಸ್ಟ್ 5ರಂದು ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ (ಸಂವಿಧಾನದ 370ನೇ ವಿಧಿ) ರದ್ದಾಗಿದ್ದು, ಇದಾದ ನಂತರವೇ ಕೆಲವೊಂದು ಸರ್ಕಾರಿ ಸಂಸ್ಥೆಗಳಿಗೆ ಮರುನಾಮಕರಣ ಮಾಡುವ ಪ್ರಕ್ರಿಯೆ ಆರಂಭವಾಗಿತ್ತು. ಈಗ ಸುಮಾರು 75 ಸರ್ಕಾರಿ ಸ್ವಾಮ್ಯದ ರಚನೆಗಳಿಗೆ ಮರುನಾಮಕರಣ ಮಾಡುವ ಪ್ರಕ್ರಿಯೆ ಆರಂಭವಾಗಿದೆ.
ಇದನ್ನೂ ಓದಿ: ರೋಹಿಂಗ್ಯಾಗಳ ಗಡಿಪಾರು ವಿಚಾರ: ಸುಪ್ರೀಂಗೆ ಪರಿಷ್ಕೃತ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ