ETV Bharat / bharat

ಗಡಿಯಲ್ಲಿ ಗುಂಡಿನ ಕಾಳಗ: ಉಗ್ರನನ್ನು ಹೊಡೆದುರುಳಿಸಿದ ಭದ್ರತಾಪಡೆ, ಯೋಧ ಹುತಾತ್ಮ - Jammu and Kashmir

ಜಮ್ಮುಕಾಶ್ಮೀರದ ರಜೌರಿಯಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಇಂದು ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಭದ್ರತಾ ಪಡೆ ಉಗ್ರನೊಬ್ಬನನ್ನು ಹೊಡೆದುರುಳಿಸಿದೆ.

ಓರ್ವ ಯೋಧ ಹುತಾತ್ಮ
ಓರ್ವ ಯೋಧ ಹುತಾತ್ಮ
author img

By

Published : Aug 19, 2021, 3:18 PM IST

ರಜೌರಿ (ಜಮ್ಮುಕಾಶ್ಮೀರ) : ಗಡಿಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಇಂದು ಥನಮಂಡಿಯಲ್ಲಿ ಭದ್ರತಾಪಡೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿವೆ.

ಥನಮಂಡಿ ಬೆಲ್ಟ್​ನಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಖಚಿತಪಡಿಸಿಕೊಂಡ ಭದ್ರತಾ ಪಡೆ ಶೋಧ ಕಾರ್ಯ ಮುಂದುವರಿಸಿದೆ. ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಫೈರಿಂಗ್ ಮಾಡಿದ ವೇಳೆ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ: ಶೂಟೌಟ್​ನಲ್ಲಿ ಮೂವರು ಉಗ್ರರ ಹತ್ಯೆ, ಓರ್ವ ಪಾಕ್​ ಯೋಧ ಹುತಾತ್ಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.