ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು)ದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಹಾಗೂ ಇತರ ಒಂಬತ್ತು ಜನರ ವಿರುದ್ಧ ದೆಹಲಿ ಪೊಲೀಸರು ದೇಶದ್ರೋಹ ಪ್ರಕರಣದಲ್ಲಿ ಸಲ್ಲಿಸಿದ ಚಾರ್ಜ್‌ಶೀಟ್ ಕುರಿತು ದೆಹಲಿ ನ್ಯಾಯಾಲಯ ಸಮನ್ಸ್ ನೀಡಿದೆ.
ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಸಿಎಮ್ಎಂ) ಪಂಕಜ್ ಶರ್ಮಾ ಅವರು ಸೋಮವಾರ ಅಂತಿಮ ವರದಿಯನ್ನು ಪಡೆದುಕೊಂಡಿದ್ದಾರೆ. ದೆಹಲಿ ಪೊಲೀಸರು ಈ ಪ್ರಕರಣದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಅಗತ್ಯವಾದ ನಿರ್ಬಂಧಗಳನ್ನು ಪಡೆದಿದ್ದಾರೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.
ಕನ್ಹಯ್ಯ ಕುಮಾರ್ ಮತ್ತು ಜೆಎನ್‌ಯು ಮಾಜಿ ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಸೇರಿದಂತೆ ಇತರರು ಜೆಎನ್‌ಯು ಕ್ಯಾಂಪಸ್ನಲ್ಲಿ 2016 ರಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ ಘಟನೆ ವಿರುದ್ಧ ಅವರ ಮೇಲೆ ಕೇಸ್ ದಾಖಲಾಗಿತ್ತು.