ಪದವಿ, ಸ್ನಾತಕೋತ್ತರ ಪದವಿ ಪಡೆದು ಉದ್ಯೋಗಕ್ಕಾಗಿ ಕಾಯುತ್ತಿರುವ ಯುವ ಜನತೆಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಶಾರ್ಟ್ ಸರ್ವೀಸ್ ಕಮಿಷನ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಭಾರತದಾದ್ಯಂತ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
![ಅಧಿಸೂಚನೆ](https://etvbharatimages.akamaized.net/etvbharat/prod-images/indian-navy_2404newsroom_1682330307_440.jpg)
ಹುದ್ದೆ ವಿವರ: ನೌಕಾಪಡೆಯಲ್ಲಿರುವ ಜನರಲ್ ಸರ್ವೀಸ್, ಏರ್ ಟ್ರಾಫಿಕ್, ನವರಲ್ ಏರ್ ಆಪರೇಷನ್ಸ್ ಆಫೀಸರ್, ಪೈಲಟ್ ಲಾಜಿಸ್ಟಿಕ್, ನೌಕಾ ಅರ್ಮನೆಂಟ್ ಇನ್ಸ್ಪೆಕ್ಟೊರೇಟ್ ಕೇಡರ್, ಶಿಕ್ಷಣ, ಸೇರಿದಂತೆ ಹಲವು ವಿಭಾಗಗಳಲ್ಲಿ ಖಾಲಿ ಇರುವ 242 ಹುದ್ದೆಗಳ ಭರ್ತಿಗೆ ಮುಮದಾಗಲಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿಟೆಕ್, ಎಂಬಿಎ, ಎಂಎಸ್ಸಿ, ಎಂಸಿಎ, ಬಿಎಸ್ಸಿ, ಸೇರಿದಂತೆ ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಕೆ: ಜನವರಿ 2, 1999ರಿಂದ 2005 ಜನವರಿಗೆ 1ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈ ಹುದ್ದೆಗೆ ಮಾಸಿಕ 56,100 ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿಯಲ್ಲಿ ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು. ಜೊತೆಗೆ ಈ ಹುದ್ದೆಗಳನ್ನು ಮೆರಿಟ್ ಜೊತೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಎನ್ಸಿಸಿ ಅಭ್ಯರ್ಥಿಗಳಿಗೆ ಶೇ 5ರಷ್ಟು ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಕೆ ಹೇಗೆ: ಈ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ಜಾಲತಾಣದಲ್ಲಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳು ಮತ್ತು ಪ್ರಮಾಣ ಪತ್ರಗಳನ್ನು ಸಲ್ಲಿಸುವ ಮೂಲಕ ಅರ್ಜಿ ಭರ್ತಿ ಮಾಡಬಹುದಾಗಿದೆ.
ಈ ಹುದ್ದೆಗಳನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭದಲ್ಲಿ 10 ವರ್ಷಗಳವರೆಗೆ ಶಾರ್ಟ್ ಸರ್ವೀಸ್ ಕಮಿಷನ್ ಸೇವೆಯನ್ನು ನೀಡಲಾಗುತ್ತದೆ. ಈ ಹುದ್ದೆಯನ್ನು ಗರಿಷ್ಠ 2 ಅವಧಿಗೆ ಅಂದರೆ (02 ವರ್ಷಗಳು + 02 ವರ್ಷಗಳು) ಗರಿಷ್ಠ 04 ವರ್ಷಗಳವರೆಗೆ ವಿಸ್ತರಿಸಬಹುದು. ಸೇವಾ ಅಗತ್ಯತೆ, ಕಾರ್ಯಕ್ಷಮತೆ, ವೈದ್ಯಕೀಯ ಅರ್ಹತೆ ಮತ್ತು ಅಭ್ಯರ್ಥಿಗಳ ಇಚ್ಛೆ ಮೇರೆಗೆ ಈ ಹುದ್ದೆ ವಿಸ್ತರಣೆ ನಡೆಸಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಏಪ್ರಿಲ್ 29ರಿಂದ ಆರಂಭವಾಗಲಿದ್ದು, ಮೇ 14ರವರೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಇನ್ನಿತರ ವಿವರ ಪಡೆಯಲು ಭಾರತೀಯ ನೌಕಪಡೆ ಜಾಲತಾಣವಾದ joinindiannavy.gov.in ಗೆ ಭೇಟಿ ನೀಡಬೇಕಿದೆ.
ಇದನ್ನೂ ಓದಿ: UPSC ನೇಮಕಾತಿ: ಜ್ಯೂ.ಎಂಜಿನಿಯರ್ ಸೇರಿ 146 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ