ಬ್ಯಾಂಕಿಂಗ್ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡ ಸಿಹಿ ಸುದ್ದಿ ನೀಡಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೆಡಿಟ್ ಅನಾಲಿಸ್ಟ್, ರಿಲೇಷನ್ಶಿಪ್ ಮ್ಯಾನೇಜರ್ ಸೇರಿದಂತೆ ಒಟ್ಟು 157 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಭಾರತಾದ್ಯಂತ ಈ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ, ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ರಿಲೇಷನ್ಶಿಪ್ ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಫೊರೆಕ್ಸ್ ಅಕ್ವಾಸಿಷನ್ ಅಂಡ್ ರಿಲೇಷನ್ಶಿಪ್ ಮ್ಯಾನೇಜರ್ ನ ಸ್ಕೇಲ್ 2 ಮತ್ತು 3 ಹುದ್ದೆ ಸೇರಿದಂತೆ ಒಟ್ಟು 157 ಹುದ್ದೆಗಳ ನೇಮಕಾತಿಗೆ ಮುಂದಾಗಲಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಸಿಎ, ಸಿಎಂಎ, ಸಿಎಸ್, ಸಿಎಫ್ಎ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಕನಿಷ್ಟ 24ರಿಂದ ಗರಿಷ್ಠ 42 ವರ್ಷದ ವಯೋಮಾನ ಹೊಂದಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಇನ್ನು ಈ ಹುದ್ದೆಗಳಿಗೆ ಹುದ್ದೆ ಅನುಸಾರ 48,170 ರೂ. ಯಿಂದ 89,890 ರೂ. ವರೆಗೆ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆ ವಿಧಾನ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ಗುಂಪು ಚರ್ಚೆ, ಮನೋಬಲ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಮುನ್ನ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಪರಿಶೀಲನೆ ಮಾಡತಕ್ಕದ್ದು. ಅರ್ಜಿ ಸಲ್ಲಿಕೆಗೆ ಮುನ್ನ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಸರಿಯಾಗಿಟ್ಟುಕೊಳ್ಳಿ. ಬಳಿಕ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಅಭ್ಯರ್ಥಿಗಳು ಏಪ್ರಿಲ್ 27 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 17ರಂದು ಕಡೆಯ ದಿನಾಂಕವಾಗಿದೆ. ಈ ದಿನವೇ ಅರ್ಜಿ ಶುಲ್ಕ ಪಾವತಿಗೂ ಕಡೆಯ ದಿನವಾಗಿದೆ.
ಈ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಮತ್ತು ವಿವರ ಸೇರಿದಂತೆ ಅಧಿಕೃತ ಅಧಿಸೂಚನೆ ವೀಕ್ಷಣೆಗೆ bankofbaroda.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಉದ್ಯೋಗ ಪಡೆಯಲು ಡಿಗ್ರಿಗಳಿಗಿಂತ ಕೌಶಲಗಳು ಮುಖ್ಯ: ವೃತ್ತಿಪರರ ಪ್ರತಿಪಾದನೆ