ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಉಪವಿಭಾಗದ ಝಂಗರ್ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳ ಜಂಟಿ ತಂಡ ಶುಕ್ರವಾರ ಬೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ 8.96 ಕಿಲೋಗ್ರಾಂಗಳಷ್ಟು ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಬಿಎಸ್‌ಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಜೌರಿ ಅಮೃತಪಾಲ್ ಸಿಂಗ್ ಹೇಳಿದ್ದಾರೆ.
ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಬಿಎಸ್‌ಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಗುಪ್ತಚರ ಮಾಹಿತಿಯ ಆಧಾರದ ಮೇಲೆ ನೌಶೇರಾ ವಲಯದ ಜಂಗರ್‌ನ ಎಲ್‌ಒಸಿ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಆ ಪ್ರದೇಶದ ಸೇನಾ ಘಟನ ಕಾಗೂ ಪೊಲೀಸರು ಹಾಗೂ ಬಿಎಸ್‌ಎಫ್ ಈ ಕಾರ್ಯಾಚರಣೆ ಕೈಗೊಂಡಿತ್ತು. ಕಾರ್ಯಾಚರಣೆ ವೇಳೆ ಆ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿದ ತಂಡ ವ್ಯಾಪಕ ಶೋಧ ನಡೆಸಿದೆ ಎಂದು ರಾಜೌರಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಮೃತಪಾಲ್ ಸಿಂಗ್ (ಐಪಿಎಸ್) ಹೇಳಿದ್ದಾರೆ.
ತಂಡದ ಕಾರ್ಯಾಚರಣೆ ವೇಳೆ 8 ಕೆಜಿ 960 ಗ್ರಾಂ ತೂಕದ ಐದು ಪ್ಯಾಕೆಟ್ ಮಾದಕ ದ್ರವ್ಯ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ನೌಶೇರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ 171/2023 ಯು/ಎಸ್‌ಎಸ್ 8/21/22 ಎನ್‌ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಎಸ್‌ಎಸ್‌ಪಿ ರಾಜೌರಿ ತಿಳಿಸಿದ್ದಾರೆ.
ರಜೌರಿ ಎಸ್‌ಎಸ್‌ಪಿ, ಅಮೃತಪಾಲ್ ಸಿಂಗ್ (ಐಪಿಎಸ್) ಈ ಬಗ್ಗೆ ಮಾತನಾಡಿ, ಪ್ರಕರಣದ ಕುರಿತು ತನಿಖೆ ಮತ್ತು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್‌ಒಸಿಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಮಾದಕವಸ್ತುಗಳು ಪತ್ತೆಯಾಗಿರುವುದು, ಎಲ್‌ಒಸಿಯಲ್ಲಿ ಕಳ್ಳಸಾಗಣೆ ಪ್ರಯತ್ನವನ್ನು ಸೂಚಿಸುತ್ತದೆ. ಆದರೆ, ತಮ್ಮ ತಂಡ ಅದನ್ನು ವಿಫಲಗೊಳಿಸಿದೆ ಎಂದು ಅವರು ಹೇಳಿದರು.
ಪಾಕಿಸ್ತಾನಿ ಮಾದಕವಸ್ತು ಕಳ್ಳಸಾಗಣೆದಾರ ಹತ್ಯೆ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಬಳಿ ಪಾಕಿಸ್ತಾನಿ ಮಾದಕ ವಸ್ತು ಕಳ್ಳಸಾಗಾಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಇತ್ತೀಚೆಗೆ ಬಿಎಸ್‌ಎಫ್ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಎಸ್ಎಂಪುರ ಪೋಸ್ಟ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯ ಚಲನವಲನಗಳನ್ನು ಗಮನಿಸಿದ ಗಡಿ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದದನು. ನಂತರ ಪರಿಶೀಲಿಸಿದಾಗ ಆತನ ಬಳಿ 4 ಕೆಜಿ ಮಾದಕವಸ್ತು ಪತ್ತೆಯಾಗಿದ್ದು, ವಸ್ತುವನ್ನು ಆತನಿಂದ ವಶಪಡಿಸಿಕೊಳ್ಳಲಾಗಿತ್ತು.
ಇದನ್ನೂ ಓದಿ: ಪಾಕ್ನಿಂದ ಒಳನುಸುಳಲು ಯತ್ನಿಸಿದ ಪಾಕ್ ಉಗ್ರ ಬಿಎಸ್‌ಎಫ್ ಗುಂಡೇಟಿಗೆ ಬಲಿ.. 4 ಕೆಜಿ ಮಾದಕ ವಸ್ತು ವಶ: ವಿಡಿಯೋ