ಹೈದರಾಬಾದ್: ಲಂಡನ್ನ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ಹಾಗೂ ವಿವಿಧ ವಿದೇಶಿ ಕನ್ನಡ ಸಂಘಟನೆಗಳಿಂದ ಬಸವಣ್ಣ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಝೂಮ್ ಆ್ಯಪ್ ಮೂಲಕ ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಶ್ರೀ ಬಸವಲಿಂಗಪಟ್ಟದೇವರು ದಿವ್ಯ ಸಾನಿಧ್ಯ ವಹಿಸಿದ್ದರು. ಭಾರತೀಯ ಕಾಲಮಾನ ಸಂಜೆ 5:30ಕ್ಕೆ ಕಾರ್ಯಕ್ರಮ ನಡೆಯಿತು. ಲಂಡನ್ನ ಬಸವ ಪುತ್ಥಳಿ ಬಳಿ ಸಂವಿಧಾನ ಶಿಲ್ಪಿಯ ಗೌರವಾರ್ಪಣೆ ಕಾರ್ಯಕ್ರಮ ನಡೆಸಲಾಗಿದ್ದು, ಕಾರ್ಯಕ್ರಮದಲ್ಲಿ ಅನೇಕರು ಭಾಗಿಯಾಗಿದ್ದರು. ಲ್ಯಾಂಬೆತ್ ನಗರದ ಮಾಜಿ ಮೇಯರ್ ಡಾ. ನೀರಜ ಪಟೇಲ್, ಲಂಡನ್ನಲ್ಲಿರುವ ಭಾರತೀಯ ಹೈಕಮೀಷನರ್ ರುಚಿ ಘನಶ್ಯಾಮ್ ಭಾಗಿಯಾಗಿದ್ದರು. ಈ ವೇಳೆ ಅಂಬೇಡ್ಕರ್, ಬಸವಣ್ಣನ ಪುತ್ಥಳಿಗೆ ನಮನ ಸಲ್ಲಿಕೆ ಮಾಡಲಾಯಿತು.
- " class="align-text-top noRightClick twitterSection" data="">
ಥೇಮ್ಸ್ ನದಿ ದಂಡೆಯಲ್ಲಿರುವ ಕ್ರಾಂತಿಕಾರಿ ಬಸವಣ್ಣನವರ ಪುತ್ಥಳಿ ನಿರ್ಮಾಣ ಮಾಡಲಾಗಿದ್ದು, ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯಾ ಸೇರಿ ವಿವಿಧ ದೇಶಗಳ ಕನ್ನಡ ಪರ ಸಂಘಟನೆ ಪ್ರತಿನಿಧಿಗಳು ಭಾಗಿಯಾಗಿದ್ದರು. ಝೂಮ್ ಆ್ಯಪ್ ಮೂಲಕ ಭಾಗಿಯಾಗಿ ಮಾತನಾಡಿದ ಸಚಿವರು ಜಗಜ್ಯೋತಿ ಬಸವಣ್ಣ, ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಚರಿತ್ರೆಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಮುಂದಾಗಬೇಕು ಎಂದಿದ್ದಾರೆ.