ETV Bharat / bharat

ದಯಾಮರಣ ಕೋರಿ ನ್ಯಾಯಾಧೀಶೆ ಬಹಿರಂಗ ಪತ್ರ: ಇವತ್ತೇ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್ - ಡಿವೈ ಚಂದ್ರಚೂಡ್

ತಮ್ಮ ಹಿರಿಯ ನ್ಯಾಯಾಧೀಶರು ಮತ್ತು ಅವರ ಸಹಚರರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳಾ ನ್ಯಾಯಾಧೀಶರೊಬ್ಬರು ಸುಪ್ರೀಂ ಕೋರ್ಟ್​ ಸಿಜೆಐಗೆ ಬಹಿರಂಗ ಪತ್ರ ಬರೆದಿದ್ದಾರೆ.

UP Judge seeks permission to 'End Life' in open letter

author img

By ETV Bharat Karnataka Team

Published : Dec 15, 2023, 2:31 PM IST

Updated : Dec 15, 2023, 4:37 PM IST

ನವದೆಹಲಿ: ತಮ್ಮ ಹಿರಿಯ ನ್ಯಾಯಾಧೀಶರು ಮತ್ತು ಅವರ ಸಹಚರರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶೆಯೊಬ್ಬರು ತನಗೆ ದಯಾಮರಣ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಸದ್ಯ ಈ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ವಿಷಯದ ಬಗ್ಗೆ ಅಲಹಾಬಾದ್​ ಹೈಕೋರ್ಟ್​ನಿಂದ ಸ್ಪಷ್ಟನೆ ಕೋರಿದ್ದಾರೆ. ಅಲ್ಲದೇ ಪತ್ರವನ್ನೇ ವಿಚಾರಣಾ ಅರ್ಜಿಯನ್ನಾಗಿ ಪರಿಗಣಿಸಿರುವ ಚಂದ್ರಚೂಡ್ ಅವರು ಇವತ್ತೇ ಪ್ರಕರಣದ ವಿಚಾರಣೆ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.

"ದಯವಿಟ್ಟು ನನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ನನಗೆ ಅನುಮತಿ ನೀಡಿ. ನನ್ನ ಜೀವನ ಕೊನೆಯಾಗಲಿ" ಎಂದು ನ್ಯಾಯಾಧೀಶೆ ಪತ್ರದಲ್ಲಿ ಬರೆದಿದ್ದಾರೆ. ತಾವು ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿನ ಜಿಲ್ಲಾ ನ್ಯಾಯಾಧೀಶರು ಮತ್ತು ಅವರ ಸಹಚರರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

"ನಾನು ತಡೆಯಲು ಆಗದಷ್ಟು ನನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ನನ್ನನ್ನು ಸಂಪೂರ್ಣ ಕಸದಂತೆ ನಡೆಸಿಕೊಳ್ಳಲಾಗಿದೆ. ನನ್ನ ಜೀವನ ಕ್ರಿಮಿಕೀಟದ ಜೀವನದಂತಾಗಿದೆ" ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿ ಅತುಲ್ ಎಂ ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್​ನ ರಿಜಿಸ್ಟ್ರಾರ್ ಜನರಲ್​ಗೆ ಪತ್ರ ಬರೆದು, ಮಹಿಳಾ ನ್ಯಾಯಾಧೀಶರ ದೂರಿನ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಇಂದು ಬೆಳಗ್ಗೆ ಕೋರಿದ್ದರು. ಹೈಕೋರ್ಟ್​ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳು ಕೂಡ ಬಹಿರಂಗ ಪತ್ರದ ಬಗ್ಗೆ ಗಮನಹರಿಸಿದ್ದಾರೆ ಹಾಗೂ ಈ ವಿಷಯವನ್ನು ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ತಿಳಿಸಲಾಗಿದೆ.

ಜುಲೈ 2023 ರಲ್ಲಿ ಹೈಕೋರ್ಟ್​ನ ಆಂತರಿಕ ದೂರು ಸಮಿತಿಗೆ ದೂರು ನೀಡಿದ್ದಾಗಿ ಹಾಗೂ ತನ್ನ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ನ್ಯಾಯಾಧೀಶೆ ಹೇಳಿಕೊಂಡಿದ್ದಾರೆ. ಆದರೆ, ವಿಚಾರಣೆಯು ಸಂಪೂರ್ಣ ಮೋಸದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. "ನನಗೆ ಇನ್ನು ಮುಂದೆ ಬದುಕುವ ಇಚ್ಛೆ ಇಲ್ಲ. ಕಳೆದ ಒಂದೂವರೆ ವರ್ಷದಲ್ಲಿ ನಾನು ನಡೆದಾಡುವ ಶವದ ಸ್ಥಿತಿಗೆ ಬಂದಿದ್ದೇನೆ. ನನ್ನ ಜೀವನದಲ್ಲಿ ಯಾವುದೇ ಉದ್ದೇಶ ಉಳಿದಿಲ್ಲ" ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ : ಕೊಲೆ ಪ್ರಕರಣ: ಒಂದೇ ಕುಟುಂಬದ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ!

Last Updated : Dec 15, 2023, 4:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.