ETV Bharat / bharat

ತ್ವರಿತ ಪರಿಹಾರಕ್ಕೆ ನ್ಯಾಯಾಧೀಶರ ಸಂಖ್ಯೆ ಹೆಚ್ಚಳ ಅಗತ್ಯ : ಸಿಜೆ ಎನ್‌ ವಿ ರಮಣ - CJI Justice NV Ramana

ಅನೇಕ ರಾಜ್ಯಗಳ ಸರ್ಕಾರಿ ನೌಕರರ ಸಂಖ್ಯೆಯನ್ನು ಕಡಿತ ಮಾಡುತ್ತಿವೆ. ಆದರೆ, ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ಹೊಸದಾಗಿ 4,320ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಸೃಷ್ಟಿಸಿದೆ ಎಂದು ಸಿಜೆ ಎನ್​ ವಿ ರಮಣ ತಿಳಿಸಿದರು..

ಸುಪ್ರೀಂಕೋರ್ಟ್​ನ ಮುಖ್ಯ ನಾಯಮೂರ್ತಿ ಎನ್​.ವಿ.ರಮಣ

author img

By

Published : Apr 15, 2022, 5:15 PM IST

ಹೈದ್ರಾಬಾದ್​(ತೆಲಂಗಾಣ) : ನ್ಯಾಯಾಂಗದ ಪ್ರಕರಣಗಳಲ್ಲಿ ತ್ವರಿತ ಪರಿಹಾರಕ್ಕೆ ನ್ಯಾಯಾಧೀಶರ ಸಂಖ್ಯೆ ಹೆಚ್ಚಾಗಬೇಕಿದೆ ಎಂದು ಸುಪ್ರೀಂಕೋರ್ಟ್​ನ ಮುಖ್ಯ ನಾಯಮೂರ್ತಿ ಎನ್​.ವಿ.ರಮಣ ಹೇಳಿದ್ದಾರೆ. ಹೈದ್ರಾಬಾದ್​ನ ಗಚಿಬೌಲಿಯಲ್ಲಿ ನಡೆದ ತೆಲಂಗಾಣದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನ ಉದ್ದೇಶಿಸಿ ಅವರು ಮಾತನಾಡಿದರು.

ನ್ಯಾಯಾಂಗ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದೆ. ಹಾಗೆ ಜಿಲ್ಲಾ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಸಂಖ್ಯೆಯೂ ಅಧಿಕವಾಗಬೇಕು. ಇತ್ತೀಚಿಗೆ ತೆಲಂಗಾಣದ ಹೈಕೋರ್ಟ್​ನಲ್ಲಿ ನ್ಯಾಯಾಧೀಶರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅದೇ ರೀತಿಯಾಗಿ ಬಾಕಿ ಉಳಿದ ಪ್ರಕರಣಗಳು ಮುಂದಿನ ಎರಡು ವರ್ಷದಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗಲಿದೆ ಎಂದರು.

ಹೈದ್ರಾಬಾದ್​ನಲ್ಲಿ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆಯಾಗಿದೆ. ವಿವಾದಗಳನ್ನು ಇತ್ಯರ್ಥ ಪಡಿಸಲು ಈ ಕೇಂದ್ರ ಅನುಕೂಲವಾಗಲಿದೆ. ಇಂತಹ ಕೇಂದ್ರ ತಮ್ಮ ರಾಜ್ಯಗಳಲ್ಲೂ ಆರಂಭವಾಗಬೇಕೆಂದು ಅನೇಕ ಜನರು ಬಯಸುತ್ತಾರೆ. ತೆಲಂಗಾಣದಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಬಲ ಪಡಿಸುವ ಕೆಲಸವನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್​ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಇತ್ತೀಚೆಗೆ ಅನೇಕ ರಾಜ್ಯಗಳ ಸರ್ಕಾರಿ ನೌಕರರ ಸಂಖ್ಯೆಯನ್ನು ಕಡಿತ ಮಾಡುತ್ತಿವೆ. ಇದಕ್ಕೆ ಪ್ರತಿಯಾಗಿ ಗುತ್ತಿಗೆ ನೌಕರರನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೇಮಿಸಿಕೊಳ್ಳುತ್ತಿವೆ ಎಂದು ಸಿಜೆಐ ಬೇಸರ ವ್ಯಕ್ತಪಡಿಸಿದರು. ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಹೈಕೋರ್ಟ್​ನ ಮುಖ್ಯ ನಾಯಮೂರ್ತಿ ಸತೀಶ್ಚಂದ್ರ ಶರ್ಮಾ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಏಕಕಾಲಕ್ಕೆ ಸೂರ್ಯಾಸ್ತ-ಚಂದ್ರೋದಯ ದರ್ಶನ: ಕನ್ಯಾಕುಮಾರಿಯಲ್ಲಿ ನಾಳೆ ವಿಸ್ಮಯ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.