ನವದೆಹಲಿ: ಕೇಂದ್ರ ವಿಮಾನಯಾನ ಖಾತೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಜ್ಯೋತಿರಾಧಿತ್ಯ ಸಿಂಧಿಯಾ ಅವರ ಫೇಸ್ಬುಕ್ ಅಕೌಂಟ್ ಹ್ಯಾಕ್ ಆಗಿದೆ. ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ.
ಅವರ ಫೇಸ್ಬುಕ್ ಅಕೌಂಟ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಅದರಲ್ಲಿ ಕಾಂಗ್ರೆಸ್ನ ಹಳೇ ವಿಡಿಯೋ ಹಾಕಿದ್ದಾರೆ. ಇದರ ಬಗ್ಗೆ ಸಿಂಧಿಯಾ ಅವರ ಸೋಶಿಯಲ್ ಮೀಡಿಯಾಗೆ ಗೊತ್ತಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಹಳೇ ವಿಡಿಯೋ ಡಿಲೀಟ್ ಮಾಡಿದ್ದಾರೆ. ಜತೆಗೆ ಪೇಜ್ ರಿಕವರಿ ಮಾಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗ್ವಾಲಿಯರ್ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ, ನಿನ್ನೆ ತಡರಾತ್ರಿ 12:14ಕ್ಕೆ ಫೇಸ್ಬುಕ್ ಖಾತೆ ಹ್ಯಾಕ್ ಮಾಡಲಾಗಿದ್ದು, ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಸಮಯದಲ್ಲಿನ ಕೆಲವೊಂದು ವಿಡಿಯೋ ಶೇರ್ ಮಾಡಿದ್ದಾರೆ.
ಇದನ್ನೂ ಓದಿರಿ: Tokyo Olympics ಈ ಬಾರಿ ಪ್ರೇಕ್ಷಕರಿಲ್ಲದೆ ನಡೆಯಲಿದೆ ಜಾಗತಿಕ ಕ್ರೀಡೋತ್ಸವ
2020 ರ ಮಾರ್ಚ್ನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಸಿಂಧಿಯಾ ಬಿಜೆಪಿ ಸೇರಿದ್ದ ಬೆನ್ನಲ್ಲೇ ಮಧ್ಯಪ್ರದೇಶ ಕಾಂಗ್ರೆಸ್ ನ 22 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನಗೊಳ್ಳುವಂತೆ ಮಾಡಿದ್ದರು. ಇದೀಗ ಅವರಿಗೆ ಕೇಂದ್ರದಲ್ಲಿ ಮಹತ್ವದ ಸಚಿವ ಸ್ಥಾನ ನೀಡಲಾಗಿದೆ.