ಕೈಥಲ್: ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ 10 ಜನರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೈಥಲ್ದ ಪುಂಡ್ರಿ ಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಎರಡೂ ವಾಹನಗಳು ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದವು ಎಂದು ಹೇಳಲಾಗುತ್ತಿದ್ದು, ಗೋಚರವಾಗದ ಕಾರಣ ಪರಸ್ಪರ ಡಿಕ್ಕಿಯಾಗಿವೆ. ಅಪಘಾತದಲ್ಲಿ 10 ಜನರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನು ಓದಿ-ಸಿಎಂ ಯೋಗಿ ಅದಿತ್ಯನಾಥ್, ದೇವೇಂದ್ರ ತಿವಾರಿಗೆ ಜೀವ ಬೆದರಿಕೆ: ಹೆಸರು ವಿಳಾಸ ಸಮೇತ ಪತ್ರ ಕಳುಹಿಸಿದ ಭೂಪ