ಕೈತಾಲ್ (ಹರಿಯಾಣ ): ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈಗ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಿಸಿ,ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗುಹ್ಲಾ ಚೀಕಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಸ್ಪಾ ಕೇಂದ್ರವನ್ನು ಹೋಮ್ ಗಾರ್ಡ್ ಅಧಿಕಾರಿ ನಡೆಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಹೋಮ್ ಗಾರ್ಡ್ ಅಧಿಕಾರಿಯ ಇನ್ನೋವಾ ಕಾರಿನಲ್ಲಿದ್ದ ಸಮವಸ್ತ್ರವನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಅಗತ್ಯವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಓದಿ:ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನಿರಾಕರಣೆ: ಕೇಂದ್ರದ ವಿರುದ್ಧ ರಾಗಾ ಕಿಡಿ