ETV Bharat / bharat

ಭಾರತ್​ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಲಿರುವ ನಟ ಕಮಲ್ ಹಾಸನ್

author img

By

Published : Dec 18, 2022, 8:54 PM IST

ದೆಹಲಿಯಲ್ಲಿ ಡಿಸೆಂಬರ್ 24ರಂದು ಸಾಗಲಿರುವ ಭಾರತ್​ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಖ್ಯಾತ ನಟ ಕಮಲ್ ಹಾಸನ್ ಹೆಜ್ಜೆ ಹಾಕಲಿದ್ದಾರೆ.

kamal-haasan-to-take-part-in-bharat-jodo-yatra
ಭಾರತ್​ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಲಿರುವ ನಟ ಕಮಲ್ ಹಾಸನ್

ಚೆನ್ನೈ (ತಮಿಳುನಾಡು): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಖ್ಯಾತ ನಟ ಮತ್ತು ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಪಾಲ್ಗೊಳ್ಳಲಿದ್ದಾರೆ. ದೆಹಲಿಯಲ್ಲಿ ಡಿಸೆಂಬರ್ 24ರಂದು ಸಾಗಲಿರುವ ಭಾರತ್​ ಜೋಡೋ ಯಾತ್ರೆಯಲ್ಲಿ ಕಮಲ್ ಹಾಸನ್ ಹೆಜ್ಜೆ ಹಾಕಲಿದ್ದಾರೆ.

ಚೆನ್ನೈನಲ್ಲಿ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಹಾಸನ್, ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ರಾಹುಲ್ ಗಾಂಧಿಯವರು ತಮ್ಮನ್ನು ಆಹ್ವಾನಿಸಿದ್ದಾರೆ ಎಂದು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್​ ನೇತೃತ್ವದ ಪಾದಯಾತ್ರೆಯಲ್ಲಿ ನಮ್ಮ ನಾಯಕ ಕಮಲ್​ ಹಾಸನ್ ಅವರೊಂದಿಗೆ ಪಕ್ಷದ ಕಾರ್ಯಕರ್ತರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಎಂಎನ್‌ಎಂ ವಕ್ತಾರ ಮುರಳಿ ಅಪ್ಪಾಸ್ ತಿಳಿಸಿದ್ದಾರೆ.

ಕಮಲ್​ ಹಾಸನ್ ಅಧ್ಯಕ್ಷತೆಯಲ್ಲಿ ಎಂಎನ್‌ಎಂ ಆಡಳಿತ ಮತ್ತು ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಕಮಲ್​​ ಹಾಸನ್​ ಈ ಘೋಷಣೆ ಮಾಡಿದರು ಎಂದು ತಿಳಿಸಿದ್ದಾರೆ.

ತಮಿಳುನಾಡಿದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್​ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದಾರೆ. ಸದ್ಯ ರಾಜಸ್ಥಾನದಲ್ಲಿ ಸಾಗುತ್ತಿರುವ ಯಾತ್ರೆಯು ನೂರು ದಿನಗಳನ್ನು ಪೂರೈಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಂಡ ಆರ್​ಬಿಐ ಮಾಜಿ ಗವರ್ನರ್ ರಾಜನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.