ETV Bharat / bharat

ಮಧ್ಯಪ್ರದೇಶ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಕಮಲ್​ನಾಥ್​ ರಾಜೀನಾಮೆ

author img

By

Published : Apr 28, 2022, 6:01 PM IST

ಮಧ್ಯಪ್ರದೇಶದಲ್ಲಿ ಮುಂಬರುವ 2023ರ ವಿಧಾನಸಭಾ ಚುನಾವಣೆ ಮೇಲೆ ಈಗಲೇ ದೃಷ್ಟಿ ನೆಟ್ಟಿರುವ ಕಾಂಗ್ರೆಸ್​ ಹೈಕಮಾಂಡ್, ಒಬ್ಬ ವ್ಯಕ್ತಿ, ಒಂದು ಹುದ್ದೆ ನೀತಿಯ ಮೊರೆ ಹೋಗಿದೆ.

ಮಾಜಿ ಮುಖ್ಯಮಂತ್ರಿ ಕಮಲ್​ ನಾಥ್​
ಮಾಜಿ ಮುಖ್ಯಮಂತ್ರಿ ಕಮಲ್​ ನಾಥ್​

ಭೋಪಾಲ್​(ಮಧ್ಯಪ್ರದೇಶ): ಮಧ್ಯಪ್ರದೇಶ ಕಾಂಗ್ರೆಸ್​​ನಲ್ಲಿ ಭಾರಿ ಬದಲಾವಣೆಯಾಗಿದೆ. ಮಾಜಿ ಮುಖ್ಯಮಂತ್ರಿ ಕಮಲ್​ ನಾಥ್​ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗೋವಿಂದ್​ ಸಿಂಗ್​ ಅವರನ್ನು ಹೊಸ ಸಿಎಲ್​ಪಿ ನಾಯಕರನ್ನಾಗಿ ನೇಮಿಸಲಾಗಿದೆ.

ಕಮಲ್​ ನಾಥ್​ ಪ್ರಸ್ತುತ ರಾಜ್ಯ ಕಾಂಗ್ರೆಸ್​ ಘಟಕದ ಅಧ್ಯಕ್ಷರೂ ಆಗಿದ್ದು, ಒಬ್ಬ ವ್ಯಕ್ತಿ, ಒಂದು ಹುದ್ದೆ ನಿಯಮದಡಿ ಈ ಬದಲಾವಣೆ ಮಾಡಲಾಗಿದೆ. ಈಗಾಗಲೇ ರಾಜೀನಾಮೆಯನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ. ಭಿಂದ್​ ಜಿಲ್ಲೆಯ ಲಹರ್​ ಕ್ಷೇತ್ರದ ಶಾಸಕ ಗೋವಿಂದ್​ ಸಿಂಗ್​ ಅವರನ್ನು ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಮುಂಬರುವ 2023ರ ವಿಧಾನಸಭಾ ಚುನಾವಣೆಯ ದೃಷ್ಟಿಯಲ್ಲಿರಿಸಿಕೊಂಡು ಕಾಂಗ್ರೆಸ್​ ಹೈಕಮಾಂಡ್​ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಕಾಂಗ್ರೆಸ್​ ಘಟಕದ ಅಧ್ಯಕ್ಷರಾಗಿ ಕಮಲ್​ ನಾಥ್​ ಅವರೇ ಮುಂದುವರೆಯಲಿದ್ದಾರೆ ಎಂದು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ತಿಳಿಸಿದ್ದಾರೆ.

ಇದನ್ನೂ ಓದಿ: 'ನಮ್ಮಲ್ಲಿ ಯೋಗಿ ಇಲ್ಲ, ಭೋಗಿಗಳಿದ್ದಾರೆ': ಯುಪಿ ಸರ್ಕಾರಕ್ಕೆ ರಾಜ್ ಠಾಕ್ರೆ ಮೆಚ್ಚುಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.