ನವದೆಹಲಿ : ಸಿಪಿಐ ನಾಯಕ ಮತ್ತು ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಹಾಗೂ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಶಾಸಕ ಜಿಗ್ನೇಶ್ ಮೇವಾನಿ ಇಂದು (ಮಂಗಳವಾರ) ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಈ ಇಬ್ಬರೂ ಯುವನಾಯಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇನ್ನು, ಈ ಬೆಳವಣಿಗೆ 2022ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ರೂಪಿಸಿರುವ ರಣತಂತ್ರದ ಒಂದು ಭಾಗವೆಂದೇ ಹೇಳಲಾಗ್ತಿದೆ. ಪಕ್ಷ ಸೇರ್ಪಡೆಗೂ ಮುನ್ನ ಕನ್ಹಯ್ಯಕುಮಾರ್ ಅವರು ಮಧ್ಯಾಹ್ನ ಶಹೀದ್-ಎ-ಅಜಮ್ ಭಗತ್ ಸಿಂಗ್ ಪಾರ್ಕ್‌ಗೆ ಭೇಟಿ ನೀಡಿದ್ದರು.
ದಲಿತ ನಾಯಕರಾದ ಜಿಗ್ನೇಶ್ ಮೇವಾನಿ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಬಹುದು. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಪಂಜಾಬ್‌ನಲ್ಲಿ ದಲಿತ ನಾಯಕ ಚರಣ್ಜಿತ್ ಸಿಂಗ್ ಚನ್ನಿಯನ್ನು ಮುಖ್ಯಮಂತ್ರಿಯಾಗಿ ನೇಮಿಸಿದ ತಂತ್ರವನ್ನೇ ಕಾಂಗ್ರೆಸ್ ಅಳವಡಿಸಿಕೊಂಡಿದೆ ಎಂದು ಹೇಳಲಾಗ್ತಿದೆ.
ರಾಜ್ಯದಲ್ಲಿ ದಲಿತ ಮತಗಳನ್ನು ಓಲೈಸುವ ಸಲುವಾಗಿ ಕಾಂಗ್ರೆಸ್ ಈ ಹೆಜ್ಜೆ ಇಟ್ಟಿದೆ ಹಾಗೂ ಮೇವಾನಿ ಕಾಂಗ್ರೆಸ್ ಸೇರ್ಪಡೆಯು ಗುಜರಾತಿನಲ್ಲಿ ದಲಿತ ಸಮುದಾಯದಿಂದ ಕಾಂಗ್ರೆಸ್ ಬೆಂಬಲವನ್ನು ಪಡೆಯಲು ಸಹಾಯ ಮಾಡುತ್ತದೆ.
ಇದನ್ನೂ ಓದಿ:ಪಂಜಾಬ್ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ.. ರಾಜಕೀಯ ವಿಪ್ಲವ ಕಾರಣವಾಯ್ತೇ!?