ETV Bharat / bharat

ಆಮ್ಲಜನಕದ ಸಿಲಿಂಡರ್ ಸ್ಫೋಟ: ಓರ್ವ ಸಾವು - ಉತ್ತರಪ್ರದೇಶ

ಆಮ್ಲಜನಕದ ಸಿಲಿಂಡರ್ ಮರುಪೂರಣ ಮಾಡುತ್ತಿದ್ದಾಗ ಸ್ಫೋಟಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ದಾದಾ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

Kanpur
ಆಮ್ಲಜನಕ ಸಿಲಿಂಡರ್ ಸ್ಪೋಟ
author img

By

Published : Apr 30, 2021, 10:08 AM IST

ಉತ್ತರ ಪ್ರದೇಶ: ಇಲ್ಲಿನ ಕಾನ್ಪುರದ ಪಂಕಿ ಆಕ್ಸಿಜನ್ ಸ್ಥಾವರದಲ್ಲಿ ಮರುಪೂರಣ ಮಾಡುತ್ತಿದ್ದಾಗ ಆಕ್ಸಿಜನ್​ ಸಿಲಿಂಡರ್​ ಸ್ಫೋಟಗೊಂಡಿದ್ದು, ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ. ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ದಾದಾ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಮ್ಲಜನಕ ಸಿಲಿಂಡರ್ ಮರುಪೂರಣದ ಸಮಯದಲ್ಲಿ ಅವಘಡ ಸಂಭವಿಸಿದೆ. ಮೃತನನ್ನು ಆಕ್ಸಿಜನ್ ಪ್ಲಾಂಟ್ ಕೆಲಸಗಾರ ಇಮ್ರಾದ್​ ಅಲಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯೊಬ್ಬರು ಲಾಲಾ ಲಜಪತ್ ರಾಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬ ಗಾಯಾಳುವಿಗೆ ವೈದ್ಯಕೀಯ ನೆರವು ನೀಡಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.