ETV Bharat / bharat

ಕಾರ್ಗಿಲ್ ವಿಜಯ್ ದಿವಸ್: ರಾಷ್ಟ್ರಪತಿ, ಪ್ರಧಾನಿಯಾದಿ ಗಣ್ಯರಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ - PM Narendra Modi tweet

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಷ್ಟ್ರ, ರಾಜ್ಯದ ಪ್ರಮುಖ ರಾಜಕೀಯ ನಾಯಕರು 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

tributes to soldiers who lost their lives in  Kargil War
ರಾಷ್ಟ್ರ ನಾಯಕರಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
author img

By

Published : Jul 26, 2022, 10:43 AM IST

ನವದೆಹಲಿ: ಇಂದು 'ಕಾರ್ಗಿಲ್ ವಿಜಯ್ ದಿವಸ್'. ಯುದ್ಧದಲ್ಲಿ ಹುತಾತ್ಮರಾದ ನೂರಾರು ಭಾರತೀಯ ಯೋಧರನ್ನು ಇಡೀ ದೇಶವೇ ನಮಿಸಿ, ಗೌರವಿಸುತ್ತಿದೆ. 1999ರಲ್ಲಿ ಲಡಾಖ್‌ನ ಕಾರ್ಗಿಲ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯ(ಎಲ್‌ಒಸಿ)ಯಲ್ಲಿದ್ದ ಪಾಕಿಸ್ತಾನಿ ಪಡೆಗಳನ್ನು ಭಾರತೀಯ ಸೇನೆ ಅತ್ಯಂತ ಯಶಸ್ವಿಯಾಗಿ ಹೊರಹಾಕಿತ್ತು. ಈ ಅದ್ವಿತೀಯ ವಿಜಯ ದಿನ ಸ್ಮರಿಸಲು ಪ್ರತಿ ವರ್ಷ ಜು.26 ರಂದು 'ಕಾರ್ಗಿಲ್ ವಿಜಯ್ ದಿವಸ್' ಎಂದು ದೇಶಾದ್ಯಂತ ಆಚರಿಸಲಾಗುತ್ತದೆ.

  • 'ಶೌರ್ಯ ಮತ್ತು ನಿರ್ಣಯದ ಸಂಕೇತ': ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. "ಕಾರ್ಗಿಲ್ ವಿಜಯ್ ದಿವಸ್ ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯ ಮತ್ತು ನಿರ್ಣಯದ ಸಂಕೇತ. ಭಾರತ ಮಾತೆಯನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಎಲ್ಲ ವೀರ ಯೋಧರಿಗೆ ನಾನು ನಮಿಸುತ್ತೇನೆ. ಅವರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ದೇಶವಾಸಿಗಳೆಲ್ಲರೂ ಸದಾ ಋಣಿಗಳಾಗಿರುತ್ತಾರೆ. ಜೈ ಹಿಂದ್" ಎಂದು ಟ್ವೀಟ್​​ ಮಾಡಿದ್ದಾರೆ.
  • ಹೆಮ್ಮೆ ಮತ್ತು ವೈಭವದ ಸಂಕೇತ: "ಕಾರ್ಗಿಲ್ ವಿಜಯ್ ದಿವಸ್ ಭಾರತೀಯರ ಹೆಮ್ಮೆ ಮತ್ತು ವೈಭವದ ಸಂಕೇತ. ಈ ಸಂದರ್ಭದಲ್ಲಿ, ಮಾತೃಭೂಮಿಯ ರಕ್ಷಣೆಯಲ್ಲಿ ತಮ್ಮ ಶೌರ್ಯವನ್ನು ಸಾಧಿಸಿದ ದೇಶದ ಎಲ್ಲಾ ವೀರ ಪುತ್ರರಿಗೆ ನನ್ನ ವಂದನೆಗಳು" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​​ ಮಾಡಿದ್ದಾರೆ.
    • कारगिल विजय दिवस मां भारती की आन-बान और शान का प्रतीक है। इस अवसर पर मातृभूमि की रक्षा में पराक्रम की पराकाष्ठा करने वाले देश के सभी साहसी सपूतों को मेरा शत-शत नमन। जय हिंद! pic.twitter.com/wIHyTrNPMU

      — Narendra Modi (@narendramodi) July 26, 2022 " class="align-text-top noRightClick twitterSection" data=" ">
  • ಹುತಾತ್ಮ ಯೋಧರಿಗೆ ಗೌರವ ನಮನ: "ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ಕಾರ್ಗಿಲ್ ವಿಜಯ ದಿವಸದಂದು ಗೌರವಪೂರ್ಣ ನಮನಗಳು. ಹುತಾತ್ಮ ಯೋಧರ ಅಪ್ರತಿಮ ಶೌರ್ಯ, ಸಾಹಸ, ತ್ಯಾಗ, ಬಲಿದಾನಗಳನ್ನು ಈ ದೇಶ ಸದಾ ಸ್ಮರಿಸಲಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್​​ ಮಾಡಿದ್ದಾರೆ.
    • ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ಕಾರ್ಗಿಲ್ ವಿಜಯ ದಿವಸದಂದು ಗೌರವಪೂರ್ಣ ನಮನಗಳು. ಹುತಾತ್ಮ ಯೋಧರ ಅಪ್ರತಿಮ ಶೌರ್ಯ, ಸಾಹಸ, ತ್ಯಾಗ, ಬಲಿದಾನಗಳನ್ನು ಈ ದೇಶ ಸದಾ ಸ್ಮರಿಸಲಿದೆ.#KargilVijayDiwas2022 pic.twitter.com/6AulddVetk

      — Basavaraj S Bommai (@BSBommai) July 26, 2022 " class="align-text-top noRightClick twitterSection" data=" ">
  • ಮೂವರು ಸೇವಾ ಮುಖ್ಯಸ್ಥರಿಂದ ಪುಷ್ಪಾರ್ಚನೆ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್.ಹರಿ ಕುಮಾರ್ ಮತ್ತು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದರು.

ಹುತಾತ್ಮ ಯೋಧರಿಗೆ ಪುಷ್ಪನಮನ: ಇಂದು ಬೆಳಗ್ಗೆ ಡ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಲಾಯಿತು.

  • ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದ ರಾಜನಾಥ್ ಸಿಂಗ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು."ನಮ್ಮ ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ತ್ಯಾಗಕ್ಕೆ ಭಾರತವು ನಮನ ಸಲ್ಲಿಸುತ್ತದೆ. ನಮ್ಮ ತಾಯ್ನಾಡನ್ನು ರಕ್ಷಿಸಲು ಅವರು ಅತ್ಯಂತ ಕಠಿಣ ಪರಿಸ್ಥಿತಿಗಳಲ್ಲಿ ವೀರಾವೇಶದಿಂದ ಹೋರಾಡಿದರು. ಅವರ ಶೌರ್ಯ ಮತ್ತು ಅದಮ್ಯ ಮನೋಭಾವವು ಭಾರತದ ಇತಿಹಾಸದಲ್ಲಿ ನಿರ್ಣಾಯಕ ಕ್ಷಣವಾಗಿ ಶಾಶ್ವತವಾಗಿ ಉಳಿಯುತ್ತದೆ" ಎಂದು ಸಿಂಗ್ ಹೇಳಿದರು.
  • ವಿದೇಶಾಂಗ ಸಚಿವ ಎಸ್.ಜೈಶಂಕರ್ ಕೂಡ ಶ್ರದ್ಧಾಂಜಲಿ ಸಲ್ಲಿಸಿದರು. "ಕಾರ್ಗಿಲ್ ವಿಜಯ್ ದಿವಸ್‌ದಂದು ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸಲಾಗುತ್ತದೆ. ಅವರ ಧೈರ್ಯ ಮತ್ತು ಬದ್ಧತೆ ರಾಷ್ಟ್ರವನ್ನು ಸುರಕ್ಷಿತವಾಗಿರಿಸುತ್ತದೆ ಎಂದು ಅವರು ಟ್ವೀಟ್​​ ಮಾಡಿದ್ದಾರೆ.

ಇದನ್ನೂ ಓದಿ: ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರಯೋಧರಿಗೆ ಗೌರವ: ದ್ರಾಸ್‌ನಲ್ಲಿ ಸ್ಮಾರಕಕ್ಕೆ ಪುಷ್ಪ ನಮನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.