ETV Bharat / bharat

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: 2,239 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ!

2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಫಲಿಂತಾಶದ​ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅಸಮಾಧಾನಗಳಿದ್ದರೆ ಆಗಸ್ಟ್​ ತಿಂಗಳಲ್ಲಿ ನಡೆಯುವ ಪರೀಕ್ಷೆಗೆ ಹಾಜರಾಗಬಹುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

Karnataka 2nd PUC Result
Karnataka 2nd PUC Result
author img

By

Published : Jul 20, 2021, 4:46 PM IST

ಬೆಂಗಳೂರು: 2020-21ನೇ ಸಾಲಿನ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್​ ಕುಮಾರ್ ಫಲಿತಾಂಶ ಪ್ರಕಟಿಸಿದರು.

ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶಗಳ ಆಧಾರದ ಮೇಲೆ ಈ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಮಾಡುವಂತೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗಿತ್ತು. ಇದೇ ವೇಳೆ ಫಲಿತಾಂಶದಿಂದ ಅಸಮಾಧಾನವಾಗಿದ್ದರೆ, ಆಗಸ್ಟ್​ನಲ್ಲಿ ನಡೆಯುವ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಒಟ್ಟು 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇವರ ಪೈಕಿ 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ಇದ್ದಾರೆ. ಪ್ರಮುಖವಾಗಿ 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ತೇರ್ಗಡೆಯಾಗಿದ್ದಾರೆ. ಗ್ರಾಮೀಣ ಭಾಗದಿಂದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 1,47,243 ಇದರಲ್ಲಿ 14,243 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ಪಾಸ್​

ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು https://dpue-exam.karnataka.gov.in/iipu2021 registration number/regnumber ಈ ಲಿಂಕ್‌ನ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.

ಡಿಸ್ಟಿಂಕ್ಷನ್‌ ಮತ್ತು ಫಸ್ಟ್ ಕ್ಲಾಸ್ ಸ್ಟೂಡೆಂಟ್ಸ್‌: 4,50,706

ಇದರಲ್ಲಿ 1,95,650 ಬಾಲಕರು, 2,52,056 ಬಾಲಕಿಯರಿದ್ದಾರೆ.

ದ್ವಿತೀಯ ದರ್ಜೆ- 1,67,055

ಜಸ್ಟ್ ಪಾಸ್- 68,729 ವಿದ್ಯಾರ್ಥಿಗಳು

600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳು- 2,239

ಜಿಲ್ಲಾವಾರು ವಿವರ:

  1. ದಕ್ಷಿಣ ಕನ್ನಡ 445 ವಿದ್ಯಾರ್ಥಿಗಳು
  2. ಉಡುಪಿ 149
  3. ದಕ್ಷಿಣ ಕನ್ನಡ 445
  4. ಬೆಂಗಳೂರು ದಕ್ಷಿಣ 302
  5. ಬೆಂಗಳೂರು ಉತ್ತರ 261
  6. ಮೈಸೂರು 96
  • ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು SATS ನಲ್ಲಿ ಅಪ್‌ಡೇಟ್ ಮಾಡಲು ಕಡೆ ದಿನಾಂಕ ಜುಲೈ 30
  • ಪರೀಕ್ಷೆ ಸಂಬಂಧ ಅರ್ಜಿಯನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಕೇಂದ್ರ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಲು ಆಗಸ್ಟ್ 2 ಕೊನೆಯ ದಿನಾಂಕ.
  • ಪ್ರಾಂಶುಪಾಲರು ಪರೀಕ್ಷಾ ಅರ್ಜಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾದ ದಿನಾಂಕ ಜುಲೈ 31
  • ಫಲಿತಾಂಶದ ಕುರಿತಾಗಿ ಅಸಮಾಧಾನ ಇದ್ದರೆ, ಆಗಸ್ಟ್ 19 ರಿಂದ ಸೆಪ್ಟೆಂಬರ್ 3 ಪರೀಕ್ಷೆಯಲ್ಲಿ ಹಾಜರಾಗಲು ಅವಕಾಶವಿದೆ.
  • ಎಲ್ಲಾ ರಿಪೀಟರ್ಸ್​ಗಳು ಪಾಸ್​; ಅವರಿಗೆ ಕನಿಷ್ಠ ಅಂಕ ನೀಡಲಾಗಿದೆ
  • ಫ್ರೆಶರ್ಸ್ ಫಲಿತಾಂಶ ತಿರಸ್ಕಾರ ಮಾಡಿ, ಮತ್ತೆ ಪರೀಕ್ಷೆ ತೆಗೆದುಕೊಂಡರೆ ಅವರನ್ನ ಫ್ರೆಶರ್ಸ್ ಎಂದು ಪರಿಗಣನೆ
  • ಫಲಿತಾಂಶದಿಂದ ತೃಪ್ತರಾಗದವರಿಗೆ ಆಗಸ್ಟ್ ತಿಂಗಳಲ್ಲಿ ಮತ್ತೆ ಪರೀಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.