ETV Bharat / bharat

ಏಪ್ರಿಲ್ 9ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ - State Legislative Assembly Elections

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆ ಭಾನುವಾರ ನಡೆಯಲಿದೆ.

ಬಿಜೆಪಿ
ಬಿಜೆಪಿ
author img

By

Published : Apr 7, 2023, 10:02 PM IST

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಂಘಟನಾ ಸಚಿವ ಬಿ.ಎಲ್.ಸಂತೋಷ್ ಕರ್ನಾಟಕ ಚುನಾವಣಾ ಸಹ ಉಸ್ತುವಾರಿ ಮನ್ಸುಖ್ ಮಾಂಡವಿಯಾ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು.

ನಾಳೆ ಬೆಳಗ್ಗೆ ನವದೆಹಲಿಯಲ್ಲಿ ನಡೆಯಲಿರುವ ಪಕ್ಷದ ವರಿಷ್ಠರ ಸಮಿತಿಯಾಗಿರುವ ಕೇಂದ್ರ ಸಂಸದೀಯ ಮಂಡಳಿ ಸಭೆಗೂ ಮುನ್ನ ಪ್ರಮುಖ ನಾಯಕರು ಸಭೆ ನಡೆಸಿದ್ದಾರೆ. ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತದೆ. ಭಾನುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಇದ್ದು, ಆ ಸಭೆಯಲ್ಲಿ ಒಪ್ಪಿಗೆ ಪಡೆದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ದೆಹಲಿಯಲ್ಲಿ 3 ದಿನ ಸಭೆ: ಟಿಕೆಟ್ ಹಂಚಿಕೆ ಕುರಿತು ನಡೆಯುವ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ 4.30 ರ ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಯತ್ತ ಪ್ರಯಾಣಿಸಿದ್ದಾರೆ. ದೆಹಲಿಯಲ್ಲಿ ಮೂರು ದಿನಗಳ ಕಾಲ ಸಭೆ ನಡೆಯಲಿದೆ.

ಇಂದು ಸಂಜೆಯೇ ಟಿಕೆಟ್ ಹಂಚಿಕೆ ಸಂಬಂಧ ಪೂರ್ವಭಾವಿ ಸಭೆ ದೆಹಲಿಯಲ್ಲಿ ನಿಗದಿಯಾಗಿತ್ತು. ಆ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಬೆಳಗ್ಗೆಯೇ ದೆಹಲಿಗೆ ತೆರಳಲು ಯಡಿಯೂರಪ್ಪ ಸಿದ್ಧರಾಗಿದ್ದರು. ಆದರೆ, ಪೂರ್ವಭಾವಿ ಸಭೆ ರದ್ದಾದ ಹಿನ್ನೆಲೆಯಲ್ಲಿ ಬೆಳಗ್ಗೆ ದೆಹಲಿಗೆ ತೆರಳುವುದನ್ನು ರದ್ದುಗೊಳಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸಂಜೆ ದೆಹಲಿಗೆ ತೆರಳಲಿದ್ದಾರೆ.

ಮೇ 10ರಂದು ರಾಜ್ಯ ವಿಧಾನಸಬಾ ಚುನಾವಣೆ ನಿಗದಿಯಾಗಿದೆ. ಈಗಾಗಲೇ ಕಾಂಗ್ರೆಸ್ ಒಟ್ಟು 224 ಸ್ಥಾನಗಳ ಪೈಕಿ 166 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಜೆಡಿಎಸ್ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡಿದೆ.

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮ: ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೆ ಸಕಲ ಸಿದ್ಧತೆ ನಡೆಯುತ್ತಿವೆ. ಮಾರ್ಚ್ 31 ಮತ್ತು ಏಪ್ರಿಲ್ 1 ರಂದು ಜಿಲ್ಲಾ ಕೋರ್ ಕಮಿಟಿಗಳಿಂದ ಆಯಾ ಜಿಲ್ಲೆಗಳ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಅಲ್ಲದೇ, ಏಪ್ರಿಲ್ 4 ಮತ್ತು 5 ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಈ ಕುರಿತು ಪಕ್ಷದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದು, ನಾಳೆ ಮತ್ತು ನಾಡಿದ್ದು ಚುನಾವಣಾ ಸಮಿತಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯ ಪರಿಶೀಲನೆ ನಡೆಸಲಾಗುತ್ತದೆ. ಕೋರ್ ಕಮಿಟಿ ಒಮ್ಮತದ ಪಟ್ಟಿಯನ್ನು ಹೈಕಮಾಂಡ್​ಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದರು.

ಏಪ್ರಿಲ್ 8 ರಂದು ನವದೆಹಲಿಯಲ್ಲಿ ಪಕ್ಷದ ಅತ್ಯುನ್ನತ ಸಮಿತಿಯಾದ ಕೇಂದ್ರ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಪರಿಶೀಲನೆ ನಡೆಸಲಾಗುತ್ತದೆ. ಮೂರು ಹಂತದಲ್ಲಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. 8 ರಂದು ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ಇನ್ನೆರಡು ದಿನ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಪಟ್ಟಿಯನ್ನು ಹೈಕಮಾಂಡ್​ಗೆ ಕಳುಹಿಸಲಾಗುತ್ತದೆ. 8 ರಂದು ಸಂಸದೀಯ ಮಂಡಳಿ ಸಭೆ ಇದ್ದು, ಅಂದೇ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ : ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ: ಏಪ್ರಿಲ್ 8 ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ..?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.