ETV Bharat / bharat

ಮೋದಿ ಭೇಟಿ ಮಾಡಿದ ಬೊಮ್ಮಾಯಿ: ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್​​ ಮಂಜೂರಾತಿಗೆ ಮನವಿ - ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್​​ ಮಂಜೂರು

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

Karnataka CM meet PM modi
Karnataka CM meet PM modi
author img

By

Published : Jul 30, 2021, 7:30 PM IST

Updated : Jul 30, 2021, 7:36 PM IST

ಬೆಂಗಳೂರು: ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಈ ವೇಳೆ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿದು ಬಂದಿದೆ.

  • ಮುಖ್ಯಮಂತ್ರಿ ಶ್ರೀ @BSBommai ರವರು ಇಂದು ನವದೆಹಲಿಯಲ್ಲಿ ಗೌರವಾನ್ವಿತ ಪ್ರಧಾನಿ ಶ್ರೀ @narendramodi ರವರನ್ನು ಭೇಟಿ ಮಾಡಿ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚಿಸಿದರು.@PMOIndia pic.twitter.com/CU4sDsi7b4

    — CM of Karnataka (@CMofKarnataka) July 30, 2021 " class="align-text-top noRightClick twitterSection" data=" ">

ಇದೇ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಆಲ್​ ಇಂಡಿಯಾ ಮೆಡಿಕಲ್​​ ಸೈನ್ಸ್ ​(ಏಮ್ಸ್​) ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು.

ಇದನ್ನೂ ಓದಿ: ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಿದ ಬೊಮ್ಮಾಯಿ: ಮೇಕೆದಾಟು ಯೋಜನೆ ಬಗ್ಗೆ ಮಹತ್ವದ ಚರ್ಚೆ?

ಈ ಸಂದರ್ಭದಲ್ಲಿ ನೂತನ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿ, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಕೇಂದ್ರ ಸಚಿವರಾದ ಪ್ರಹ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ರಾಜೀವ್​ ಚಂದ್ರಶೇಖರ್​, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹಾಗೂ ಎ. ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

  • Karnataka CM Basavaraj Bommai & Ministers in Central Government from Karnataka called on PM Narendra Modi in Delhi today. pic.twitter.com/GAVV8KLZ3C

    — ANI (@ANI) July 30, 2021 " class="align-text-top noRightClick twitterSection" data=" ">

ಮೋದಿ ಭೇಟಿಗೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ, ಅವರಿಗೆ ನೆನಪಿನ ಕಾಣಿಕೆ ನೀಡಿದರು. ಇದಕ್ಕೂ ಮುಂಚೆ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿ ರಾಜ್ಯದ ನೀರಾವರಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

  • #WATCH | Karnataka Chief Minister Basavaraj Bommai met BJP national president JP Nadda at his residence in Delhi today.

    He is on a two-day visit to the National Capital pic.twitter.com/w8BQsLkbsK

Last Updated : Jul 30, 2021, 7:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.