ನವದೆಹಲಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿ ಪ್ರವಾಸದಲ್ಲಿದ್ದಾರೆ. ಈ ವೇಳೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹೊರಹಾಕಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಆಗುವಂತೆ ನನ್ನ ಬಳಿ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದರು. ಆದರೆ ನಾನು ಆ ಆಫರ್ ತಿರಸ್ಕಾರ ಮಾಡಿದ್ದೇನೆ ಎಂದು ತಿಳಿಸಿದರು. ರಾಷ್ಟ್ರ ರಾಜಕಾರಣದಲ್ಲಿ ನನಗೆ ಯಾವುದೇ ರೀತಿಯ ಆಸಕ್ತಿ ಇಲ್ಲ. ಕರ್ನಾಟಕ ರಾಜಕೀಯದಲ್ಲಿ ಮಾತ್ರ ಉಳಿಯುವುದಾಗಿ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
-
Rahul Gandhi asked me to be a general secretary of Congress but I refused. I don't have any interest in national politics. I'm confined to the politics of Karnataka only: Former CM and Congress leader Siddaramaiah in Delhi pic.twitter.com/kbL3IPR7HW
— ANI (@ANI) October 5, 2021 " class="align-text-top noRightClick twitterSection" data="
">Rahul Gandhi asked me to be a general secretary of Congress but I refused. I don't have any interest in national politics. I'm confined to the politics of Karnataka only: Former CM and Congress leader Siddaramaiah in Delhi pic.twitter.com/kbL3IPR7HW
— ANI (@ANI) October 5, 2021Rahul Gandhi asked me to be a general secretary of Congress but I refused. I don't have any interest in national politics. I'm confined to the politics of Karnataka only: Former CM and Congress leader Siddaramaiah in Delhi pic.twitter.com/kbL3IPR7HW
— ANI (@ANI) October 5, 2021
ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ನನಗೆ ಈ ಭೇಟಿ ವೇಳೆ ಕೇಳಿಲ್ಲ. ಆ ರೀತಿಯ ಸುದ್ದಿ ಹರಿದಾಡುತ್ತಿದ್ದು, ಅದು ಸುದ್ಧ ಸುಳ್ಳು ಎಂದರು.
ಇದನ್ನೂ ಓದಿರಿ: ದೆಹಲಿಯಲ್ಲಿ ಸೋನಿಯಾ ಭೇಟಿಯಾದ ಸಿದ್ದರಾಮಯ್ಯ; ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ
ಕಳೆದ ಕೆಲ ದಿನಗಳ ಹಿಂದೆ ದೆಹಲಿಗೆ ಬರುವಂತೆ ಸಿದ್ದರಾಮಯ್ಯಗೆ ಹೈಕಮಾಂಡ್ನಿಂದ ಬುಲಾವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ರಾಷ್ಟ್ರ ರಾಜಧಾನಿಗೆ ತೆರಳಿದ್ದರು.