ನವದೆಹಲಿ: ರೋಹಿಂಗ್ಯಾಗಳ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಗೆ ರಾಜ್ಯ ಸರ್ಕಾರ ಹೊಸ ಮತ್ತು ಪರಿಷ್ಕೃತ ಅಫಿಡವಿಟ್ ಸಲ್ಲಿಸಿದೆ. ಬೆಂಗಳೂರಿನಲ್ಲಿರುವ ರೋಹಿಂಗ್ಯಾಗಳನ್ನು ಗಡಿಪಾರು ಮಾಡುವ ಬಗ್ಗೆ ಈವರೆಗೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂಬ ನಿರ್ಧಾರದಿಂದ ಹಿಂದೆ ಸರಿದಿದೆ.
ಕರ್ನಾಟಕ ರಾಜ್ಯ ಪೊಲೀಸ್ ತನ್ನ ವ್ಯಾಪ್ತಿಯೊಳಗೆ ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ರೋಹಿಂಗ್ಯಾಗಳನ್ನು ಇರಿಸಿಲ್ಲ. ಆದರೆ, ರಾಜ್ಯದಲ್ಲಿ 126 ರೋಹಿಂಗ್ಯಾಗಳನ್ನು ಗುರುತಿಸಲಾಗಿದೆ ಎಂದು ಗೃಹ ಇಲಾಖೆ ಹೊಸ ಅಫಿಡವಿಟ್‌ನಲ್ಲಿ ಮಾಹಿತಿ ನೀಡಿದೆ. ನ್ಯಾಯಾಲಯದ ಎಲ್ಲಾ ಆದೇಶಗಳನ್ನು ಪಾಲಿಸುವುದಾಗಿ ಸರ್ಕಾರ ಹೇಳಿದೆ.
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ರೋಹಿಂಗ್ಯಾಗಳನ್ನು ಗಡಿಪಾರು ಮಾಡುವ ನಿರ್ದೇಶನ ನೀಡುವಂತೆ ವಕೀಲರಾದ ಅಶ್ವಿನಿ ಉಪಾಧ್ಯಾಯ ಅವರು 2017ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರ ಈ ಹಿಂದೆ ಮನವಿ ಮಾಡಿತ್ತು.
ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: ಎರಡು ಸುಧಾರಿತ ಲಘು ಹೆಲಿಕಾಪ್ಟರ್ ಸೇರ್ಪಡೆ