ETV Bharat / bharat

ಟ್ವಿಟರ್‌ ಎಂಡಿ ಮನೀಶ್​ಗೆ ಕರ್ನಾಟಕ ಹೈಕೋರ್ಟ್​ನಿಂದ ರಿಲೀಫ್

Twitter MD ಬೆಂಗಳೂರು ನಿವಾಸಿ ಮಹೇಶ್ವರಿ ಯುಪಿ ಪೊಲೀಸರು ಜಾರಿ ಮಾಡಿರುವ ಸಮನ್ಸ್​ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಆರೋಪಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಅವರು ನನ್ನ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ ಎಂದಿದ್ದರು.

Karnataka high court
Karnataka high court
author img

By

Published : Jul 23, 2021, 4:34 PM IST

ಬೆಂಗಳೂರು: ವಿವಾದಿತ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ಇಂಡಿಯಾ ಎಂಡಿ ಮನೀಶ್ ಮಹೇಶ್ವರಿ ಅವರಿಗೆ ಉತ್ತರ ಪ್ರದೇಶ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಅನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

  • Karnataka HC quashes UP Police's notice sent to Twitter India MD Manish Maheshwari under Section 41A of CrPC in connection with a video related to assault on an elderly man in Ghaziabad

    Court allows police to record his statement via virtual mode or by visiting his office/home pic.twitter.com/jfyXVGHEET

    — ANI (@ANI) July 23, 2021 " class="align-text-top noRightClick twitterSection" data=" ">
ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಗಾಜಿಯಾಬಾದ್​ನ ಲೋನಿ ಬಾರ್ಡರ್ ಠಾಣೆ ಪೊಲೀಸರು ನೀಡಿರುವ ನೋಟಿಸ್ ರದ್ದು ಕೋರಿ ಟ್ವಿಟರ್ ಎಂಡಿ ಮನೀಶ್ ಮಹೇಶ್ವರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಜಿ. ನರೇಂದರ್ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿರುವ ಪೀಠ, ಪ್ರಕರಣದಲ್ಲಿ ಮೊದಲಿಗೆ ಸಿಆರ್ ಪಿಸಿ ಸೆಕ್ಷನ್ 160 ರಡಿ ನೋಟಿಸ್ ಜಾರಿ ಮಾಡಿದ್ದ ಪೊಲೀಸರು ನಂತರ ಸಿಆರ್ ಪಿಸಿ ಸೆಕ್ಷನ್ 41 ಎ ಅಡಿ ನೋಟಿಸ್ ಜಾರಿ ಮಾಡಿದ್ದಾರೆ. ಹೀಗೆ ಕಾನೂನನ್ನು ಬೇಕಾದಂತೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟು ಪೊಲೀಸರ ನೋಟಿಸ್ ರದ್ದು ಮಾಡಿ ಆದೇಶಿಸಿದೆ.

ಇದೇ ವೇಳೆ ಟ್ವಿಟರ್ ಇಂಡಿಯಾ ಸಂಸ್ಥೆಯು ಐರ್ಲೆಂಡ್‌ನಲ್ಲಿರುವ ಟ್ವಿಟರ್ ಇಂಟರ್ ನ್ಯಾಷನಲ್ ಕಂಪೆನಿಯಿಂದ ನಿಯಂತ್ರಿಸಲ್ಪಡುತ್ತಿದೆ. ಅಂತೆಯೇ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಪೋಸ್ಟ್ ಗಳನ್ನು ನಿಯಂತ್ರಿಸುವುದು ಕಷ್ಟ ಎಂಬುದನ್ನೂ ನ್ಯಾಯಾಲಯ ಪರಿಗಣಿಸುತ್ತದೆ. ಹೀಗಾಗಿ ಪೊಲೀಸರು ಸೆಕ್ಷನ್ 41 ರಡಿ ನೋಟಿಸ್ ನೀಡಿರುವ ಕ್ರಮ ಸರಿಯಲ್ಲ ಎಂದಿರುವ ಪೀಠ, ಸೆಕ್ಷನ್ 160 ರಡಿ ನೀಡಿದ ನೋಟಿಸ್ ನಂತೆ ಪರಿಗಣಿಸಿ ಪ್ರಕರಣದ ತನಿಖೆಗೆ ಸಹಕಾರ ನೀಡುವಂತೆ ಟ್ವಿಟರ್ ಎಂಡಿಗೆ ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ :

ಗಾಜಿಯಾಬಾದ್​ನಲ್ಲಿ ತಾಯಿತ ಮಾರುವ ಮುಸ್ಲಿಂ ವೃದ್ಧನೋರ್ವನಿಗೆ ಆರು ಜನರ ಗುಂಪು ಥಳಿಸಿ ಆತನ ಗಡ್ಡ ಕತ್ತರಿಸಿ, ಬಲವಂತವಾಗಿ ವಂದೇ ಮಾತರಂ ಹಾಗೂ ಜೈ ಶ್ರೀರಾಮ್ ಎಂದು ಹೇಳಿಸಿದ್ದರೆನ್ನಲಾದ ವಿಡಿಯೋವೊಂದನ್ನು ಟ್ವಿಟ್ಟರ್​ನಲ್ಲಿ ಹಾಕಲಾಗಿತ್ತು. ಈ ಸಂಬಂಧ​ ಎಫ್ಐಆರ್ ದಾಖಲಿಸಿಕೊಂಡ ಲೋನಿ ಬಾರ್ಡರ್ ಠಾಣೆ ಪೊಲೀಸರು, ಆರೋಪಿಗಳು ಗಲಭೆಗೆ ಪ್ರಚೋದಿಸಿದ್ದಾರೆ. ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ್ದಾರೆ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ ಹೊಂದಿದ್ದಾರೆ. ಕಿಡಿಗೇಡಿತನ ಹಾಗೂ ಕ್ರಿಮಿನಲ್ ಪಿತೂರಿ ಮಾಡಿದ್ದಾರೆ ಎಂಬ ಆರೋಪಗಳಡಿಯಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್​ಗಳಾದ 153, 153 ಎ, 295 ಎ, 505, 120 ಬಿ ಮತ್ತು 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ಕೆಲ ಆರೋಪಿಗಳನ್ನು ಬಂಧಿಸಿರುವ ಪೊಲೀಸರು. ಟ್ವಿಟರ್ ಎಂಡಿಗೆ ವಿಚಾರಣೆಗೆ ಹಾಜರಾಗುವಂತೆ ಮೊದಲಿಗೆ ಸೆಕ್ಷನ್ 160ರ ಅಡಿ ನೋಟಿಸ್ ನೀಡಿದ್ದರು. ಈ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸಿಆರ್ ಪಿಸಿ ಸೆಕ್ಷನ್ 41(ಎ) ಅಡಿ ನೋಟಿಸ್ ಜಾರಿ ಮಾಡಿದ್ದರು. ಇದನ್ನು ಪ್ರಶ್ನಿಸಿ ಮನೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.