ETV Bharat / bharat

ಹಿಜಾಬ್ ಸಂಘರ್ಷ: ಹೈಕೋರ್ಟ್‌ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ - ಕರ್ನಾಟಕ ಹಿಜಾಬ್​ ವಿವಾದ

ಕರ್ನಾಟಕ ಹೈಕೋರ್ಟ್‌ ನೀಡಿದ ಮಧ್ಯಂತರ ಆದೇಶದ ಪ್ರಕಾರ, ಶಾಲೆ ಹಾಗು ಕಾಲೇಜುಗಳನ್ನು ರಾಜ್ಯದಲ್ಲಿ ತೆರೆಯಬಹುದು. ಆದ್ರೆ, ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳು ಭಾರತೀಯ ಸಂವಿಧಾನದ ಪರಿಚ್ಛೇದಗಳಾದ 14, 15, 19 21 ಹಾಗು 25 ಅನ್ನು ಉಲ್ಲಂಘಿಸುವ ಯಾವುದೇ ರೀತಿಯ ಧಾರ್ಮಿಕ ಸಂಕೇತಗಳನ್ನು ಪ್ರಕಟಪಡಿಸುವ ದಿರಿಸುಗಳನ್ನು ಧರಿಸುವಂತಿಲ್ಲ ಎಂದು ತಿಳಿಸಿದೆ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾದ ಮೇಲ್ಮನವಿ ಅರ್ಜಿಯಲ್ಲಿ ತಿಳಿಸಲಾಗಿದೆ.

Karnataka hijab row in  Supreme Court, Karnataka High Court February 10 interim order,  high court order to restrain students,  Karnataka Hijab row, Karnataka Hijab row update, ಸುಪ್ರೀಂ ಕೋರ್ಟ್​ನಲ್ಲಿ ಕರ್ನಾಟಕ ಹಿಜಾಬ್​ ವಿವಾದ, ಫೆಬ್ರುವರಿ 10ರಂದು ಮಧ್ಯಂತರ ಆದೇಶ ನೀಡಿದ ಕರ್ನಾಟಕ ಹೈಕೋರ್ಟ್​, ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿರ್ಬಂಧಿಸಿದ್ದ ಹೈಕೋರ್ಟ್​, ಕರ್ನಾಟಕ ಹಿಜಾಬ್​ ವಿವಾದ, ಕರ್ನಾಟಕ ಹಿಜಾಬ್​ ವಿವಾದ ಸುದ್ದಿ,
ಹೈಕೋರ್ಟ್​ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಕದ ತಟ್ಟಿದ ವಿದ್ಯಾರ್ಥಿಗಳು
author img

By

Published : Feb 11, 2022, 9:36 AM IST

Updated : Feb 11, 2022, 9:47 AM IST

ನವದೆಹಲಿ: ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳು ಯಾವುದೇ ರೀತಿಯ ಧಾರ್ಮಿಕ ಸಂಕೇತಗಳನ್ನು ಸೂಚಿಸುವ ದಿರಿಸುಗಳನ್ನು ಧರಿಸದೆ ಶಾಲೆ- ಕಾಲೇಜುಗಳಿಗೆ ಹಾಜರಾಗಬೇಕು ಎಂದು ಹೈಕೋರ್ಟ್‌ ನಿನ್ನೆ ನೀಡಿದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಹಿಜಾಬ್ ವಿವಾದ ಸಂಬಂಧ ರಾಜ್ಯ ಹೈಕೋರ್ಟ್​ನಲ್ಲಿ ಸಲ್ಲಿಕೆಯಾದ ಅರ್ಜಿಗಳ ಸಂಪೂರ್ಣ ವಿಚಾರಣೆ ಬಾಕಿಯಿರುವಾಗಲೇ ಕೆಲವು ವಿದ್ಯಾರ್ಥಿಗಳು ಮಧ್ಯಂತರ ಆದೇಶ ಪ್ರಶ್ನಿಸಿ ತುರ್ತು ವಿಚಾರಣೆಗಾಗಿ ಸುಪ್ರೀಂಕೋರ್ಟ್​ ಕದ ತಟ್ಟಿದ್ದಾರೆ.

ಹೈಕೋರ್ಟ್‌ ಹೇಳಿದ್ದೇನು?

ಫೆಬ್ರವರಿ 10ರಂದು ಹಿಜಬ್​-ಕೇಸರಿ ವಿವಾದದಿಂದಾಗಿ ಮುಚ್ಚಲಾಗಿದ್ದ ಶಾಲಾ-ಕಾಲೇಜುಗಳನ್ನು ತಕ್ಷಣಕ್ಕೆ ಜಾರಿಯಾಗುವಂತೆ ಆರಂಭಿಸಬೇಕು. ಅಂತಿಮ ಆದೇಶ ಬರುವವರೆಗೂ ವಿದ್ಯಾರ್ಥಿಗಳು ಹಿಜಾಬ್​-ಕೇಸರಿ ಶಾಲನ್ನು ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ತಿಳಿಸಿದೆ. ಈ ಪ್ರಕರಣದ ಕುರಿತು ಶೀಘ್ರವೇ ತೀರ್ಪು ನೀಡಲಾಗುವುದು. ಅಲ್ಲಿಯವರೆಗೂ ರಾಜ್ಯದಲ್ಲಿ ಯಥಾಸ್ಥಿತಿ ಕಾಪಾಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಮಧ್ಯಂತರ ಆದೇಶದಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಅಂತಿಮ ಆದೇಶ ಬರುವವರೆಗೂ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಿಜಬ್​ - ಕೇಸರಿ ಶಾಲು ಧರಿಸುವಂತಿಲ್ಲ - ಹೈಕೋರ್ಟ್​​

ಪ್ರಕರಣದ ಮುಂದಿನ ವಿಚಾರಣೆ ಸೋಮವಾರ ಮಧ್ಯಾಹ್ನ 2:30ಕ್ಕೆ ನಡೆಯಲಿದೆ.

Last Updated : Feb 11, 2022, 9:47 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.