ಹೈದರಾಬಾದ್(ತೆಲಂಗಾಣ): ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಮ್ಮ ಪಕ್ಷದ ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ವಿಡಿಯೋಗಳನ್ನು ಗುರುವಾರ ಬಿಡುಗಡೆ ಮಾಡಿದ್ದರು. ಈ ವಿಡಿಯೋದಲ್ಲಿ ಕರ್ನಾಟಕದಲ್ಲಿ ಈ ಹಿಂದಿನ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿರುವ ಬಗ್ಗೆಯೂ ಪ್ರಸ್ತಾಪವಾಗಿದೆ.
ಗೌಪ್ಯ ವಿಡಿಯೋದಲ್ಲಿ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ನ 16 ಶಾಸಕರ ಬಗ್ಗೆ ಕಾರ್ಯಾಚರಿಸಿ ಆಗಿನ ಸರ್ಕಾರವನ್ನು ಕೆಳಗಿಳಿಸಿದ ಬಗೆಗಿನ ಮಾತುಕತೆ ಇದೆ.
ಈ ಸಂದರ್ಭದಲ್ಲಿ ಟೀಕಾಸ್ತ್ರ ಪ್ರಯೋಗಿಸಿದ ಕೆಸಿಆರ್, ತೆಲಂಗಾಣ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ಸರ್ಕಾರಗಳನ್ನು ಅಧಿಕಾರದಿಂದ ಕೆಳಗಿಳಿಸುವುದು ಬಿಜೆಪಿಯ ಗುರಿ ಎಂದರು. ತೆಲಂಗಾಣ ಚಲನಶೀಲ ರಾಜ್ಯ ಎಂಬ ಕಾರಣಕ್ಕೆ ಕೆಡವಲು ಷಡ್ಯಂತ್ರ ರೂಪಿಸಲಾಗ್ತಿದೆ. ಮೂರು ಗಂಟೆಗಳ ವಿಡಿಯೋಗಳನ್ನು ಹೈಕೋರ್ಟ್ಗೆ ಸಲ್ಲಿಸಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ತೆಲಂಗಾಣದೊಂದಿಗೆ ದೆಹಲಿ, ಆಂಧ್ರ ಸರ್ಕಾರಗಳನ್ನೂ ಉರುಳಿಸಲು ಪಿತೂರಿ: ಬಿಜೆಪಿ ವಿರುದ್ಧ ಕೆಸಿಆರ್ ಆರೋಪ