ETV Bharat / bharat

Republic Day: ಗಣರಾಜ್ಯೋತ್ಸವ ಪರೇಡ್​ನಲ್ಲಿ ಗಮನಸೆಳೆದ ಕರ್ನಾಟಕದ ಸ್ತಬ್ಧಚಿತ್ರ - ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ

ನವದೆಹಲಿಯ ರಾಜಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ 'ಸಾಂಪ್ರದಾಯಿಕ ಕರಕುಶಲ ವಸ್ತುಗಳ ತೊಟ್ಟಿಲು' ಸ್ತಬ್ಧ ಚಿತ್ರ ಗಮನ ಸೆಳೆದಿದ್ದು, ಈ ಸ್ತಬ್ಧಚಿತ್ರವನ್ನು ಶಶಿಧರ ಅಡಪ ರೂಪಿಸಿದ್ದಾರೆ.

karnataka tableau at the 73rd Republic Day parade
Republic Day: ಗಣರಾಜ್ಯೋತ್ಸವದ ಪರೇಡ್​ನಲ್ಲಿ ಗಮನಸೆಳೆದ ಕರ್ನಾಟಕದ ಸ್ತಬ್ಧಚಿತ್ರ
author img

By

Published : Jan 26, 2022, 12:06 PM IST

ನವದೆಹಲಿ: 73ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ನವದೆಹಲಿಯ ರಾಜಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಗಮನಸೆಳೆಯಿತು. ಬೆಂಗಳೂರಿನ ಅದಿತಿ ಉರಾಳ್​ ನೇತೃತ್ವದಲ್ಲಿ ಸ್ತಬ್ಧ ಚಿತ್ರ ಪ್ರದರ್ಶನ ನಡೆಯಿತು.

ಅದಿತಿ ಉರಾಳ್​ ಜೊತೆ 12 ಕಲಾವಿದರು ಹೆಜ್ಜೆ ಹಾಕಿದ್ದು, ಕರ್ನಾಟಕದಿಂದ ಜಾಗತಿಕ ಮಾನ್ಯತೆ ಗಳಿಸಿದ ವಸ್ತುಗಳ ಸ್ತಬ್ಧಚಿತ್ರದಲ್ಲಿ ಪ್ರದರ್ಶಿಸಲಾಗಿದೆ. ಶಶಿಧರ ಅಡಪ ಕೈಚಳಕದಲ್ಲಿ ಈ ಸ್ತಬ್ಧಚಿತ್ರ ಅರಳಿದೆ. 'ಸಾಂಪ್ರದಾಯಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯದ ಕುರಿತು ಈ ಸ್ತಬ್ಧಚಿತ್ರ ರೂಪಿಸಲಾಗಿದೆ.

ಕರ್ನಾಟಕದ ಸ್ತಬ್ಧಚಿತ್ರ

ಸ್ತಬ್ಧಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕೆತ್ತನೆಯ ಕಲಾಕೃತಿ, ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲಾಕೃತಿ, ಕಿನ್ನಾಳ ಕಲಾ ವಸ್ತುಗಳು, ಕಂಚಿನ ಪ್ರತಿಮೆಗಳು, ಚೆನ್ನಪಟ್ಟಣದ ಮೆರುಗೆಣ್ಣೆಯ ಆಟಿಕೆಗಳು, ಮರಗೆತ್ತನೆ ಮತ್ತು ಕುಂಬಾರಿಕೆ ಹಾಗೂ ಹಿಂಬದಿಯಲ್ಲಿ ಪಾರಂಪರಿಕ ಕರಕುಶಲ ವಸ್ತುಗಳ ಜತೆಗೆ ಮಾತೆ ಕಮಲಾದೇವಿ ಇದ್ದಾರೆ. ಇವರು ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡಿದವರಾಗಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.