ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ದೇಗುಲದಿಂದ ಸಿಖ್ಖರ ಪವಿತ್ರ ಸ್ಥಳವಾದ ಪಾಕಿಸ್ತಾನದಲ್ಲಿರುವ ಗುರುದ್ವಾರ ದರ್ಬಾರ್ ಸಾಹಿಬ್ಗೆ (Gurdwara Darbar Sahib in Pakistan)ಸಂಪರ್ಕ ಕಲ್ಪಿಸುವ ಕರ್ತಾರ್‌ಪುರ ಸಾಹಿಬ್ ಕಾರಿಡಾರ್(Kartarpur corridor to reopen) ನಾಳೆಯಿಂದ ಪುನಾರಂಭವಾಗಲಿದೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ 'ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅನ್ನು ಬುಧವಾರದಿಂದ(ನ.17) ಪುನಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ಗುರುನಾನಕ್ ದೇವ್ ಮತ್ತು ಸಿಖ್ ಸಮುದಾಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೊಂದಿರುವ ಅಪಾರ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ಯುವತಿ ಕೊಂದು ಅಂಗಾಂಗ ಸುಟ್ಹಾಕಿದ ಕೀಚಕರು.. ಮತ್ತೊಂದು ಅತ್ಯಾಚಾರ-ಕೊಲೆ ಶಂಕೆ
ಈ ಹಿಂದೆ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಗುರುನಾನಕ್ ಜಯಂತಿಗೂ ಮುಂಚಿತವಾಗಿ ಕರ್ತಾರ್‌ಪುರ ಕಾರಿಡಾರ್ ಅನ್ನು ಆರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿಯನ್ನು ಕೋರಿದ್ದರು.
ಇದರಂತೆ ಗುರುನಾನಕ್ ದೇವ್ ಅವರ ಜಯಂತಿಯಂದು ಅವರ ಪವಿತ್ರ ಸ್ಥಳವಾದ ಗುರುದ್ವಾರ ದರ್ಬಾರ್ ಸಾಹಿಬ್ಗೆ ಸಿಖ್ ಯಾತ್ರಾರ್ಥಿಗಳು ತೆರಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದಕ್ಕೆ ಪಾಕಿಸ್ತಾನವೂ ಸಮ್ಮತಿಸಿದೆ.