ETV Bharat / bharat

ಮೇವಾರ್​ ವಿಶ್ವವಿದ್ಯಾಲಯ ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ - ಕಾಶ್ಮೀರದ ವಾಣಿಪುರ ಜಿಲ್ಲೆ

ಚಾವಣಿಯಲ್ಲಿ ನೇಣು ಬಿಗಿದುಕೊಂಡಿರುವ ವಿದ್ಯಾರ್ಥಿಯನ್ನು ಹಾಸ್ಟೆಲ್‌ನ ಬಾಲ್ಕನಿಯಲ್ಲಿ ನಿಂತಿದ್ದ ವಿದ್ಯಾರ್ಥಿನಿಯೊಬ್ಬಳು ಕಂಡು ಕಿರುಚಿದ್ದಾಳೆ. ವಾರ್ಡನ್ ಅನು ಪೂರ್ಣಾ ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸುವ ವೇಳೆಗೆ ಆಕೆ ಸಾವನ್ನಪ್ಪಿದ್ದಳು ಎಂದು ಎಸ್‌ಎಚ್‌ಒ ಶಿವಲಾಲ್ ಮೀನಾ ತಿಳಿಸಿದ್ದಾರೆ.

Kashmiri girl student died by suicide at Mewar University hostel
ಮೇವಾರ್​ ವಿಶ್ವವಿದ್ಯಾಲಯ ಹಾಸ್ಟೆಲ್​ನಲ್ಲಿ ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
author img

By

Published : Oct 8, 2022, 3:32 PM IST

ಚಿತ್ತೋರ್‌ಗಢ(ರಾಜಸ್ಥಾನ): ಮೇವಾರ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ಕಾಶ್ಮೀರಿ ವಿದ್ಯಾರ್ಥಿನಿಯೊಬ್ಬಳು ಶನಿವಾರ ವಿಶ್ವವಿದ್ಯಾಲಯದ ಹಾಸ್ಟೆಲ್​ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಕಾರಣ ಪತ್ತೆ ಹಚ್ಚುವ ಪ್ರಯತ್ನದಲ್ಲಿದ್ದಾರೆ. ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯ ಗಂಗ್ರಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಗಂಗ್ರಾರ್ ಎಸ್‌ಎಚ್‌ಒ ಶಿವಲಾಲ್ ಮೀನಾ ಮಾತನಾಡಿ, ಮೃತ ವಿದ್ಯಾರ್ಥಿನಿಯು ಕಾಶ್ಮೀರದ ವಾಣಿಪುರ ಜಿಲ್ಲೆಯವರಾಗಿದ್ದು, ರೇಡಿಯಾಲಜಿ ವಿಭಾಗದ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದರು. ಶನಿವಾರ ಮುಂಜಾನೆ 4.45ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಹಾಸ್ಟೆಲ್‌ನ ಬಾಲ್ಕನಿಯಲ್ಲಿ ನಿಂತಿದ್ದ ವಿದ್ಯಾರ್ಥಿನಿಯೊಬ್ಬಳು ಚಾವಣಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದನ್ನು ಕಂಡಿದ್ದಾಳೆ. ಬಾಲಕಿಯ ಕಿರುಚಾಟ ಕೇಳಿ ವಾರ್ಡನ್ ಅನು ಪೂರ್ಣಾ ಅವರು ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದಳು ಎಂದು ಅವರು ಹೇಳಿದರು.

ಇದನ್ನೂ ಓದಿ: ಹೊಲಕ್ಕೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ ಹಾವು ಕಚ್ಚಿ ಬಾಲಕಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.