ಢಾಕಾ: ಬಾಂಗ್ಲಾದೇಶದಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ ಜಮ್ಮು ಕಾಶ್ಮೀರದ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಕಾಶ್ಮೀರದ ಅನಂತ್ನಾಗ್ ನಿವಾಸಿಯಾಗಿದ್ದ ವಿದ್ಯಾರ್ಥಿನಿ ಖುಷ್ಬೂ ಮಂಜೂರ್ ಮೃತಪಟ್ಟವರು. ಬಾಂಗ್ಲಾದೇಶದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಮಧ್ಯಾಹ್ನ ಆಕೆ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಉಸಿರು ನಿಲ್ಲಿಸಿದ್ದಾರೆ. ಮೃತದೇಹವನ್ನು ಅಂತಿಮ ಸಂಸ್ಕಾರಕ್ಕಾಗಿ ಸ್ವದೇಶಕ್ಕೆ ತರಲು ನೆರವು ನೀಡಲು ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಓದಿ:ಓ ₹25 ಲಕ್ಷಕ್ಕೆ 2 ಹುಲಿ ಮರಿಗಳು ಮಾರಾಟಕ್ಕಿವೆ.. ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದವ ಅಂದರ್