ETV Bharat / bharat

ಮುಖ್ಯಮಂತ್ರಿ ಆಯ್ಕೆ ಗೊಂದಲ: ಕೆ.ಸಿ.ವೇಣುಗೋಪಾಲ್, ಖಂಡ್ರೆ, ಪರಂ ಹೇಳಿದ್ದೇನು? - ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಕುರಿತು ನವದೆಹಲಿಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆದಿದೆ.

KC Venugopal arrives at Sonia Gandhi's Janpath residence

author img

By

Published : May 17, 2023, 11:43 AM IST

Updated : May 17, 2023, 1:07 PM IST

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದು ನಾಲ್ಕು ದಿನಗಳು ಕಳೆದರೂ ನೂತನ ಮುಖ್ಯಮಂತ್ರಿ ಆಯ್ಕೆ ಗೊಂದಲ ಮುಂದುವರೆದಿದೆ. ಕಾಂಗ್ರೆಸ್​ ಹೈಕಮಾಂಡ್​ ಸಭೆ ಮೇಲೆ ಸಭೆಗಳನ್ನು ನಡೆಸುತ್ತಲೇ ಇದೆ. ನವದೆಹಲಿಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆದಿದ್ದು ಗೊಂದಲ ನಿವಾರಣೆಯಾಗುವ ಸಾಧ್ಯತೆ ದಟ್ಟವಾಗಿದೆ.

  • #WATCH | It's natural for dalits voting for Congress to ask for representation. Everyone in the party high command knows me. If there's a situation where Dr Parameshwara has to be made (CM), then they'll make it. I won't lobby: Dr. G Parameshwara, Cong leader on Karnataka CM post pic.twitter.com/GW1Xm6VqrJ

    — ANI (@ANI) May 17, 2023 " class="align-text-top noRightClick twitterSection" data=" ">

ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ನಡುವೆ ಪೈಪೋಟಿ ಏರ್ಪಟ್ಟಿದೆ. ನವದೆಹಲಿಯಲ್ಲಿ ಇಬ್ಬರೂ ಬೀಡುಬಿಟ್ಟಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರೂ ತಮ್ಮ ಹಕ್ಕೊತ್ತಾಯ ಮುಂದುವರೆಸಿದ್ದು ಸಿಎಂ ವಿಚಾರ ಇದೀಗ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗಳಕ್ಕೆ ಬಂದಿದೆ. ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮತನಾಡಿದ ಕೆ.ಸಿ.ವೇಣುಗೋಪಾಲ್, ಇಂದಿನ ಮಹತ್ವದ ಸಭೆಯಲ್ಲಿ ಒಳ್ಳೆಯ ನಿರ್ಧಾರ ಹೊರಬೀಳಲಿದೆ ಎಂದರು.

ಇನ್ನು ಇದೇ ವಿಚಾರವಾಗಿ ಮಾತನಾಡಿರುವ ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್,​ ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಯಾವುದೇ ವಿವಾದವಿಲ್ಲ ಎಂದಿದ್ದಾರೆ. ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳಲಿದೆ. ಇಂದು ಅಥವಾ ನಾಳೆ ಈ ವಿಚಾರಕ್ಕೆ ತೆರೆ ಬೀಳಲಿದೆ ಎಂದು ಅವರು ತಿಳಿಸಿದರು. "ದಲಿತರು ಕಾಂಗ್ರೆಸ್​ಗೆ ಮತ ಹಾಕುವವರು. ಪ್ರಾತಿನಿಧ್ಯ ಕೇಳುವುದು ಸಹಜ. ಪಕ್ಷದ ಹೈಕಮಾಂಡ್​​ನಲ್ಲಿರುವ ಎಲ್ಲರೂ ನನಗೆ ಗೊತ್ತು. ಡಾ. ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕಾದ ಪರಿಸ್ಥಿತಿ ಬಂದರೆ ಅವರು ಅದನ್ನು ಮಾಡುತ್ತಾರೆ. ಈ ವಿಚಾರದಲ್ಲಿ ನಾನು ಲಾಬಿ ಮಾಡುವುದಿಲ್ಲ" ಎಂದು ಇದೇ ವೇಳೆ ಹೇಳಿದರು. ಮಂಗಳವಾರ ಪಕ್ಷದ ಹೈಕಮಾಂಡ್ ಹೇಳಿದರೆ ಮುಖ್ಯಮಂತ್ರಿಯ ಜವಾಬ್ದಾರಿಯನ್ನು ಹೊರಲು ಸಿದ್ಧ ಎಂದು ಹೇಳುವ ಮೂಲಕ ಪರಮೇಶ್ವರ್ ಅಚ್ಚರಿ ಮೂಡಿಸಿದ್ದರು. ಇದರ ಬೆನ್ನಲ್ಲೇ ಪರೋಕ್ಷವಾಗಿ ತಾವೂ ಕೂಡ ಮುಖ್ಯಮಂತ್ರಿ ಆಕಾಂಕ್ಷಿ ಎಂಬ ಅಭಿಮತ ವ್ಯಕ್ತಪಡಿಸಿದ್ದಾರೆ.

  • #WATCH | I met the party's national president Mallikarjun Kharge and discussed the recent developments in Karnataka...Only high command will decide, we are 100% united; Decision may be by today evening: Karnataka Congress working president Eshwar Khandare on CM post pic.twitter.com/XVkWybdIDE

ಮುಖ್ಯಮಂತ್ರಿ ಆಯ್ಕೆ ವಿಚಾರ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಕರ್ನಾಟಕದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗಿದೆ. ಹೈಕಮಾಂಡ್ ನೂತನ ಮುಖ್ಯಮಂತ್ರಿ ವಿಚಾರದಲ್ಲಿ ಒಳ್ಳೆಯ ನಿರ್ಧಾರ ಪ್ರಕಟ ಮಾಡಲಿದೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಇಂದು ಸಂಜೆಯೊಳಗೆ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ ಎಂದಿದ್ದಾರೆ.

ಇನ್ನು, ಕೈ ನಾಯಕರ ಜಟಾಪಟಿ ಟೀಕಿಸಿದ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ, ಬಹುಮತ ಪಡೆದರೂ ಕಾಂಗ್ರೆಸ್ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಇದು ಪಕ್ಷದ ಆಂತರಿಕ ಸಮಸ್ಯೆಯನ್ನು ತೋರಿಸುತ್ತದೆ. ರಾಜಕೀಯಕ್ಕಿಂತ ಜನರ ಆಶೋತ್ತರಗಳು ಮುಖ್ಯ. ಕಾಂಗ್ರೆಸ್ ಆದಷ್ಟು ಬೇಗ ಸಿಎಂ ಆಯ್ಕೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ?: ಡಾ‌.ಕೆ.ಸುಧಾಕರ್

Last Updated : May 17, 2023, 1:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.