ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ರಾಷ್ಟ್ರೀಯ ಕಚೇರಿಯನ್ನು ಪಕ್ಷದ ಅಧ್ಯಕ್ಷ ಮತ್ತು ತೆಲಂಗಾಣ ಸಿಎಂ ಕೆ ಸಿ ಚಂದ್ರಶೇಖರ್ ರಾವ್ ಉದ್ಘಾಟಿಸಿದರು. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಈ ರಾಜಕೀಯ ಬೆಳವಣಿಗೆ ರಾಷ್ಟ್ರ ರಾಜಕಾರಣದಲ್ಲಿ ಸಂಚಲನವನ್ನು ಉಂಟು ಮಾಡಲಿದೆ ಎಂದು ಹೇಳಲಾಗುತ್ತಿದೆ.
ದೆಹಲಿಯ ಸರ್ದಾರ್ ಪಟೇಲ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜಶ್ಯಾಮಲ ಮತ್ತು ನವಚಂಡಿ ಯಾಗಗಳನ್ನು ನಡೆಸಲಾಯಿತು. ಉದ್ಘಾಟನೆ ನಂತರ ಕೆಸಿಆರ್ ಪಕ್ಷದ ಧ್ವಜವನ್ನು ಅನಾವರಣಗೊಳಿಸಿದರು. ಕೆಸಿಆರ್ ಕುಟುಂಬಸ್ಥರು ಸೇರಿದಂತೆ ಹಲವು ಸಚಿವರು, ಶಾಸಕರು, ಸಂಸದರು, ಎಂಎಲ್‌ಸಿಗಳು, ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.
ಮತ್ತೊಂದೆಡೆ ಉದ್ಘಾಟನಾ ಸಮಾರಂಭಕ್ಕೆ ಕೆಸಿಆರ್ ಪುತ್ರ ಮತ್ತು ತೆಲಂಗಾಣ ಸಚಿವ ಕೆಟಿಆರ್ ಅವರು ಎರಡು ಪೂರ್ವ ನಿಗದಿತ ಪ್ರಮುಖ ಸಭೆಗಳ ಹಿನ್ನೆಲೆ ಪಕ್ಷದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿಇ ಭಾಗಿಯಾಗಿರಲಿಲ್ಲ.
ಇದನ್ನೂ ಓದಿ :ಕರ್ನಾಟಕದಲ್ಲಿ ಬಿಆರ್‌ಎಸ್ ಸ್ಪರ್ಧೆ, ಕುಮಾರಸ್ವಾಮಿ ಸಿಎಂ ಆಗಬೇಕು: ಕೆಸಿಆರ್