ETV Bharat / bharat

ಉಕ್ರೇನ್‌ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಸೀಟು ಹೆಚ್ಚಿಸಿ ; ಪ್ರಧಾನಿ ಮೋದಿಗೆ ತೆಲಂಗಾಣ ಸಿಎಂ ಕೆಸಿಆರ್‌ ಪತ್ರ - ಪ್ರಧಾನಿ ನರೇಂದ್ರ ಮೋದಿಗೆ ತೆಲಂಗಾಣ ಸಿಎಂ ಪತ್ರ

20,000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಯುದ್ಧದ ಕಾರಣದಿಂದಾಗಿ ಉಕ್ರೇನ್‌ನಿಂದ ಸ್ಥಳಾಂತರಗೊಂಡಿದ್ದಾರೆ. ಇವರಲ್ಲಿ ಹೆಚ್ಚಿನವರು ಮಧ್ಯಮ ವರ್ಗದ ಕುಟುಂಬಗಳಿಂದವರಾಗಿದ್ದು, ವೈದ್ಯಕೀಯ ಶಿಕ್ಷಣವನ್ನು ಪೂರ್ಣಗೊಳಿಸುವ ಯಾವುದೇ ಭರವಸೆಯಿಲ್ಲದೆ ತಮ್ಮ ಇಡೀ ಜೀವನದ ಗಳಿಕೆಯನ್ನು ಕಳೆದುಕೊಳ್ಳಲಿದ್ದಾರೆ..

KCR urges PM Modi to accommodate Ukraine-returned medical students in Indian colleges
ಉಕ್ರೇನ್‌ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೀಟು ಕೊಡಿ; ಪ್ರಧಾನಿ ಮೋದಿಗೆ ತೆಲಂಗಾಣ ಸಿಎಂ ಕೆಸಿಆರ್‌ ಪತ್ರ
author img

By

Published : Mar 30, 2022, 12:00 PM IST

ಹೈದರಾಬಾದ್(ತೆಲಂಗಾಣ) : ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ.

ಉಕ್ರೇನ್‌ನಲ್ಲಿನ ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಹಠಾತ್ ಯುದ್ಧದಿಂದಾಗಿ ಶಿಕ್ಷಣವನ್ನು ಮೊಟಕುಗೊಳಿಸಿ ತೀವ್ರ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತಕ್ಕೆ ವಾಪಸ್‌ ಆಗಿದ್ದಾರೆ. ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಸಾಕಷ್ಟು ಸಮಯವನ್ನು ಮೀಸಲಿಟ್ಟು ಹಾಗೂ ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಿದ ಈ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದೆ. ಇವರೆಲ್ಲಾ ಅಪೂರ್ಣವಾಗಿ ಉಳಿಯುವ ಸಾಧ್ಯತೆಯಿದೆ ಎಂದು ಕೆಸಿಆರ್ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

20,000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಯುದ್ಧದ ಕಾರಣದಿಂದಾಗಿ ಉಕ್ರೇನ್‌ನಿಂದ ಸ್ಥಳಾಂತರಗೊಂಡಿದ್ದಾರೆ. ಇವರಲ್ಲಿ ಹೆಚ್ಚಿನವರು ಮಧ್ಯಮ ವರ್ಗದ ಕುಟುಂಬಗಳಿಂದವರಾಗಿದ್ದು, ವೈದ್ಯಕೀಯ ಶಿಕ್ಷಣವನ್ನು ಪೂರ್ಣಗೊಳಿಸುವ ಯಾವುದೇ ಭರವಸೆಯಿಲ್ಲದೆ ತಮ್ಮ ಇಡೀ ಜೀವನದ ಗಳಿಕೆಯನ್ನು ಕಳೆದುಕೊಳ್ಳಲಿದ್ದಾರೆ. ತೆಲಂಗಾಣದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಶಿಕ್ಷಣವನ್ನು ಪೂರ್ಣಗೊಳಿಸದೆ ಉಕ್ರೇನ್‌ನಿಂದ ಹಿಂದಿರುಗಿದ್ದಾರೆ ಎಂದು ಕೆಸಿಆರ್‌ ಹೇಳಿದ್ದಾರೆ.

ಶುಲ್ಕ ಭರಿಸಲು ನಿರ್ಧಾರ : ವೈದ್ಯಕೀಯ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ತೆಲಂಗಾಣ ಸರ್ಕಾರವು ತಮ್ಮ ರಾಜ್ಯಕ್ಕೆ ಸೇರಿದ ವಿದ್ಯಾರ್ಥಿಗಳ ವೈದ್ಯಕೀಯ ಕಾಲೇಜು ಶುಲ್ಕವನ್ನು ಸರ್ಕಾರವೇ ಭರಿಸಲು ನಿರ್ಧರಿಸಿದೆ. ಈ ವಿದ್ಯಾರ್ಥಿಗಳ ಅಸಾಧಾರಣ ಸಂದರ್ಭಗಳನ್ನು ಪರಿಗಣಿಸಿ ಅವರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಹಾಯ ಮಾಡುವ ವಿಶೇಷ ಪ್ರಕರಣವಾಗಿ ರೂಢಿಯಲ್ಲಿರುವ ನಿಯಮಗಳ ಸಡಿಲಿಕೆಯಲ್ಲಿ ಸಮಾನ ಸೆಮಿಸ್ಟರ್‌ಗಳಲ್ಲಿ ದೇಶದ ವೈದ್ಯಕೀಯ ಕಾಲೇಜುಗಳಿಗೆ ಸೇರಲು ಅನುವು ಮಾಡಿಕೊಡಬೇಕೆಂದು ನಾನು ವಿನಂತಿಸುತ್ತೇನೆ.

ಈ ಉದ್ದೇಶಕ್ಕಾಗಿ, ಈ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ವೈದ್ಯಕೀಯ ಕಾಲೇಜುಗಳಲ್ಲಿ ಒಂದು ಬಾರಿ ಆಧಾರದ ಮೇಲೆ ವಿವಿಧ ಸೆಮಿಸ್ಟರ್‌ಗಳಲ್ಲಿ ಸೀಟುಗಳನ್ನು ಪ್ರಮಾಣಾನುಗುಣವಾಗಿ ಹೆಚ್ಚಿಸಲು ಅನುಮತಿ ನೀಡಬಹುದು. ದಯವಿಟ್ಟು ಈ ವಿಷಯವನ್ನು ಸಹಾನುಭೂತಿಯಿಂದ ಪರಿಗಣಿಸಿ ಮತ್ತು ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ ಎಂದು ಕೆಸಿಆರ್ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಿಂದ ಬಂದವರ ವಿದ್ಯಾಭ್ಯಾಸಕ್ಕೆ ನೆರವಾಗಬೇಕು : ಸೊಗಡು ಶಿವಣ್ಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.