ETV Bharat / bharat

ಗುಜರಾತ್‌ನ ಬಿಜೆಪಿ ಸರ್ಕಾರದ ವಿರುದ್ಧ ಕೇಜ್ರಿವಾಲ್ ಕಿಡಿ : ಕೇಸರಿ ಕೋಟೆಗೆ ಲಗ್ಗೆ ಇಡುತ್ತಾ ಆಪ್​ !?

ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಗುಜರಾತ್‌ನ ಬಿಜೆಪಿ ಸರ್ಕಾರದಲ್ಲಿ ನೀಡುತ್ತಿರುವ ಶಿಕ್ಷಣವನ್ನು ಅವರು ಪ್ರಶ್ನಿಸಿದ್ದಾರೆ. ಎಎಪಿ ಸರ್ಕಾರ ಗುಜರಾತ್‌ನಲ್ಲಿ ಉತ್ತಮ ಶಿಕ್ಷಣವನ್ನು ತರಲಿದೆ ಎಂದು ಟ್ವೀಟ್ ಮಾಡಿದ್ದಾರೆ..

ಗುಜರಾತ್‌ನ ಬಿಜೆಪಿ ಸರ್ಕಾರದ ವಿರುದ್ಧ ಕೇಜ್ರಿವಾಲ್ ಕಿಡಿ

author img

By

Published : Apr 10, 2022, 5:21 PM IST

ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಆಮ್ ಆದ್ಮಿ ಪಕ್ಷ ದೇಶಾದ್ಯಂತ ಮುಂಬರುವ ಚುನಾವಣೆಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದೆ. ಅದರಲ್ಲೂ ಪ್ರಮುಖವಾಗಿ ಗುಜರಾತ್​ಗೆ ಕಾಲಿಡಲು ಹೆಚ್ಚಿನ ಪ್ರಯತ್ನಗಳು ನಡೆಯುತ್ತಿವೆ. ಕಳೆದ ಬಾರಿ ಗುಜರಾತ್‌ನ ಪಾಲಿಕೆ ಚುನಾವಣೆಯಲ್ಲಿ ಪಕ್ಷವು ಉತ್ತಮ ಸಾಧನೆ ಮಾಡಿತ್ತು ಮತ್ತು ಹಲವಾರು ಸ್ಥಾನಗಳನ್ನು ಗೆದ್ದಿತ್ತು.

ಈ ಬಾರಿ ರಾಮ ನವಮಿಯ ಶುಭಾಶಯ ತಿಳಿಸಿದ ನಂತರ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ಗುಜರಾತಿನ ಶಿಥಿಲಾವಸ್ಥೆಯಲ್ಲಿರುವ ಶಿಕ್ಷಣದ ಬಗ್ಗೆ ಜನ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಗುಜರಾತ್‌ನಲ್ಲಿ ಉತ್ತಮ ಶಿಕ್ಷಣಕ್ಕಾಗಿ ಧ್ವನಿ ಏರಲಾರಂಭಿಸಿದೆ. ಬಿಜೆಪಿ 27 ವರ್ಷಗಳಲ್ಲಿ ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗಲಿಲ್ಲ. ಎಎಪಿ ಸರ್ಕಾರವು ಗುಜರಾತ್‌ನ ಜನರನ್ನು ಮತ್ತು ಎಲ್ಲಾ ಪಕ್ಷಗಳನ್ನು ಕರೆದೊಯ್ಯುವ ಮೂಲಕ ಗುಜರಾತ್‌ನಲ್ಲಿ ಮತ್ತು ದೆಹಲಿಯಲ್ಲಿ ಉತ್ತಮ ಶಿಕ್ಷಣವನ್ನು ನೀಡುತ್ತದೆ ಎಂದು ಟ್ವೀಟ್​ ಮಾಡಿದ್ದಾರೆ.

ಗುಜರಾತ್‌ನ ಬಿಜೆಪಿ ಸರ್ಕಾರದ ವಿರುದ್ಧ ಕೇಜ್ರಿವಾಲ್ ಕಿಡಿ
ಗುಜರಾತ್‌ನ ಬಿಜೆಪಿ ಸರ್ಕಾರದ ವಿರುದ್ಧ ಕೇಜ್ರಿವಾಲ್ ಕಿಡಿ

ಇದನ್ನೂ ಓದಿ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ : ಮೂವರು ಮಹಿಳೆಯರು ಸಾವು, ಮಗು ಗಂಭೀರ

ಗುಜರಾತ್‌ನ ಜನರಿಗೆ ಉತ್ತಮ ಶಿಕ್ಷಣವನ್ನು ನೀಡುವ ಭರವಸೆಯೊಂದಿಗೆ ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಶ್ಲಾಘಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಸರ್ಕಾರವು ಶಿಕ್ಷಣ ಮತ್ತು ವಿದ್ಯುತ್-ರಸ್ತೆ-ನೀರಿನಂತಹ ಮೂಲ ಅಗತ್ಯಗಳ ಮೇಲೆ ಕೇಂದ್ರೀಕರಿಸುವ ಮೂಲಕ ತನ್ನ ಕೆಲಸವನ್ನು ಹೊಗಳಿಕೊಳ್ಳುತ್ತಿದೆ. ದೆಹಲಿಯ ಈ ಬೆಳವಣಿಗೆಯನ್ನು ಆಮ್ ಆದ್ಮಿ ಪಕ್ಷ ದೇಶಕ್ಕೆ ಮಾದರಿ ಎಂದು ಹೇಳುತ್ತಿದೆ. ಇದರೊಂದಿಗೆ ದೆಹಲಿಯಂತಹ ಶಿಕ್ಷಣ ವ್ಯವಸ್ಥೆಯನ್ನು ದೇಶಾದ್ಯಂತ ತರುವ ಮಾತುಗಳೂ ಕೇಳಿ ಬರುತ್ತಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.