ETV Bharat / bharat

ಲಂಚ ಕೇಳಿದ್ರೆ ನೀಡಿ, ಆದರೆ ವಿಡಿಯೋ ಮಾಡಿ ಸಿಎಂ WhatsApp ಸಂಖ್ಯೆಗೆ ಕಳುಹಿಸಿ: ಅರವಿಂದ್ ಕೇಜ್ರಿವಾಲ್​ - ಪಂಜಾಬ್​ ಸಿಎಂ ನೂತನ ನಿರ್ಧಾರ

ಭ್ರಷ್ಟಾಚಾರ ನಿಯಂತ್ರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಪಂಜಾಬ್ ಸಿಎಂ ಭಗವಂತ್ ಮಾನ್​​, ಭ್ರಷ್ಟಾಚಾರ ತಡೆಗೆ ಸಹಾಯವಾಣಿ ಆರಂಭ ಮಾಡಿದ್ದು, ಈ ವಿಚಾರವಾಗಿ ದೆಹಲಿ ಸಿಎಂ ಕೇಜ್ರಿವಾಲ್ ಮಾತನಾಡಿದರು.

Kejriwal on Punjab CM's announcement
Kejriwal on Punjab CM's announcement
author img

By

Published : Mar 17, 2022, 5:43 PM IST

ನವದೆಹಲಿ: ಪಂಜಾಬ್​​ನಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಭಗವಂತ್ ಮಾನ್​ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭ್ರಷ್ಟಾಚಾರ ತಡೆ ಸಂಬಂಧ ಸಹಾಯವಾಣಿ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಕೂಡಾ ಮಾತನಾಡಿದ್ದಾರೆ.

ಯಾರಾದ್ರೂ ನಿಮ್ಮ ಹತ್ತಿರ ಲಂಚ ಕೇಳಿದಾಗ ಇಲ್ಲ ಎಂದು ಹೇಳಬೇಡಿ ಎಂದಿರುವ ಕೇಜ್ರಿವಾಲ್​, ಅವರಿಗೆ ಹಣ ನೀಡಿ ಸಂಭಾಷಣೆ ಅಥವಾ ಅದರ ರೆಕಾರ್ಡ್ ಮಾಡಿಕೊಳ್ಳಿ. ಬಳಿಕ, ಆಡಿಯೋ/ವಿಡಿಯೋ ಅನ್ನು ನೇರವಾಗಿ ಸಿಎಂ ಅವರ ವಾಟ್ಸಾಪ್​ ಸಂಖ್ಯೆಗೆ ರವಾನಿಸಿ ಎಂದಿದ್ದಾರೆ. ಭ್ರಷ್ಟರ ವಿರುದ್ಧ ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪಂಜಾಬ್​ ಜನತೆಗೆ ನಾವು ಭರವಸೆ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

ಪಂಜಾಬ್​ ಸಿಎಂ ನಿರ್ಧಾರದ ಬಗ್ಗೆ ಅರವಿಂದ್ ಕೇಜ್ರಿವಾಲ್ ಮಾತು

ಇದನ್ನೂ ಓದಿ: ಪಂಜಾಬ್‌ನಲ್ಲಿ ಭ್ರಷ್ಟರಿಗೆ ಹೊಸ ಸಿಎಂ ಶಾಕ್: ಜನರಿಗೆ ತನ್ನದೇ ವಾಟ್ಸಾಪ್‌ ನಂಬರ್‌ ನೀಡಿ ದೂರು ಸಲ್ಲಿಸಲು ಅವಕಾಶ

ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆಯಾದಾಗಿನಿಂದಲೂ ಭಗವಂತ್ ಮಾನ್ ಜನಸ್ನೇಹಿ ಹೊಸ ಹೊಸ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಮಾರ್ಚ್​​ 23ರಂದು ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್​​ ಸಿಂಗ್​ 'ಶಹೀದ್ ದಿವಸ್'​​ ಅಂಗವಾಗಿ ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಪ್ರಾರಂಭಿಸುವುದಾಗಿ ಮಾನ್​ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ನಡೆಯುವ ಭ್ರಷ್ಟಾಚಾರದ ಬಗ್ಗೆ ಅಥವಾ ಯಾರಾದರೂ ಲಂಚ ಕೇಳಿದರೆ ರಾಜ್ಯದ ಜನರು ಇನ್ಮುಂದೆ ಯಾವುದೇ ಮುಲಾಜಿಲ್ಲದೆ ತನ್ನದೇ ವಾಟ್ಸಾಪ್​ ನಂಬರ್‌ಗೆ ವಿಡಿಯೋ ಅಥವಾ ಆಡಿಯೋ ರೆಕಾರ್ಡ್‌ ಮಾಡಿ ನೇರವಾಗಿ ಕಳುಹಿಸಬಹುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.